1. ಇದಲ್ಲದೆ ಯೆಹೋವನು ಯೋಬನಿಗೆ, [QBR]
2. “ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? [QBR] ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು. [PS]
3. {ಯೋಬನು ಯೆಹೋವನಿಗೆ ನೀಡಿದ ಪ್ರತ್ಯುತ್ತರ} [PS] ಆಗ ಯೋಬನು ಯೆಹೋವನಿಗೆ ಉತ್ತರವಾಗಿ, [QBR]
4. “ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? [QBR] ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು. [QBR]
5. ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; [QBR] ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು. [PE][PS]
6. ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, [QBR]
7. “ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, [QBR] ನೀನೇ ನನಗೆ ಉಪದೇಶಿಸು. [QBR]
8. ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? [QBR] ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ? [QBR]
9. ನಿನ್ನ ಕೈಯೂ, ದೇವರ ಕೈಯೂ ಸಮವೋ? [QBR] ದೇವರ ಧ್ವನಿಯಂತೆ ಗುಡುಗಬಲ್ಲಿಯಾ? [QBR]
10. ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು [QBR] ಪ್ರಭಾವ ಮಹತ್ವಗಳನ್ನು ಧರಿಸಿಕೋ. [QBR]
11. ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, [QBR] ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು. [QBR]
12. ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, [QBR] ದುಷ್ಟರನ್ನು ತಟ್ಟನೆ ಕೆಡವಿಬಿಡು. [QBR]
13. ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, [QBR] ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು. [QBR]
14. ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು. [QBR]
15. ನಿನ್ನಂತೆ ನನ್ನ ಸೃಷ್ಟಿಯಾಗಿರುವ [* ಮೂಲತಃ ಬೆಹೆಮೋತ್ ಅಂದರೆ ದೈತ್ಯಕಾರದ ಮೃಗ.] ನೀರಾನೆಯನ್ನು ನೋಡು; [QBR] ಎತ್ತಿನ ಹಾಗೆ ಹುಲ್ಲನ್ನು ಮೇಯುವುದು. [QBR]
16. ಇಗೋ, ಅದರ ಬಲವು ಸೊಂಟದಲ್ಲಿಯೂ, [QBR] ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ. [QBR]
17. ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; [QBR] ಅದರ ತೊಡೆಯ ನರಗಳು ಹೆಣೆದುಕೊಂಡಿವೆ. [QBR]
18. ಅದರ ಮೂಳೆಗಳು ತಾಮ್ರದ ನಳಗಳಂತೆಯೂ, [QBR] ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು. [QBR]
19. ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. [QBR] ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. [QBR]
20. ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; [QBR] ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು; [QBR]
21. ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, [QBR] ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು. [QBR]
22. ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, [QBR] ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು. [QBR]
23. ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. [QBR] ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು. [QBR]
24. ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? [QBR] ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು. [PE]