1. {ಎಲೀಫಜನ ಪ್ರತ್ಯುತ್ತರದ ಮುಂದುವರಿಕೆ} [PS] “ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? [QBR] ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? [QBR]
2. ಕೋಪದಿಂದ ಮೂರ್ಖನಿಗೆ ನಾಶವು, [QBR] ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ. [QBR]
3. ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. [QBR] ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು. [QBR]
4. ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. [QBR] ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ. [QBR]
5. ಹಸಿದವನು ಅವರ ಬೆಳೆಯನ್ನು [QBR] ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. [QBR] ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು. [QBR]
6. ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; [QBR] ದುಃಖವು ಭೂಮಿಯಿಂದ ಮೊಳೆಯುವುದಿಲ್ಲ. [QBR]
7. ಜ್ವಾಲೆಗಳು ಮೇಲಕ್ಕೆ ಹಾರುವುದು, [QBR] ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ. [QBR]
8. (ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; [QBR] ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. [QBR]
9. ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, [QBR] ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. [QBR]
10. ಭೂಮಿಯ ಮೇಲೆ ಮಳೆಸುರಿಸಿ, [QBR] ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ. [QBR]
11. ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, [QBR] ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ. [QBR]
12. ಯುಕ್ತಿವಂತರ ಕೈಯಿಂದ ಏನೂ ಆಗದಂತೆ, [QBR] ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ. [QBR]
13. ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, [QBR] ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ. [QBR]
14. ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, [QBR] ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ. [QBR]
15. ಇಂಥವರ ಬಾಯೆಂಬ ಕತ್ತಿಯಿಂದಲೂ, [QBR] ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ. [QBR]
16. ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, [QBR] ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು. [QBR]
17. ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; [QBR] ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ. [QBR]
18. ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; [QBR] ಹೊಡೆಯುವ ಕೈಯೇ ವಾಸಿಮಾಡುತ್ತದೆ. [QBR]
19. ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; [QBR] ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು. [QBR]
20. ಬರಗಾಲದಲ್ಲಿ ಮರಣದಿಂದಲೂ, [QBR] ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು. [QBR]
21. ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; [QBR] ವಿನಾಶವುಂಟಾದರೂ ನೀನು ಹೆದರುವುದಿಲ್ಲ. [QBR]
22. ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; [QBR] ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ. [QBR]
23. ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; [QBR] ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು. [QBR]
24. ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; [QBR] ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. [QBR]
25. ನಿನ್ನ ಸಂತಾನವು ದೊಡ್ಡದ್ದೆಂದೂ, [QBR] ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ. [QBR]
26. ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, [QBR] ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ. [QBR]
27. ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, [QBR] ನಿನ್ನಷ್ಟಕ್ಕೆ ನೀನೇ ತಿಳಿದುಕೋ.” [PE]