1. {#1ಎಲೀಫಜನ ಪ್ರತ್ಯುತ್ತರದ ಮುಂದುವರಿಕೆ } [QS]“ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? [QE][QS]ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? [QE]
2. [QS]ಕೋಪದಿಂದ ಮೂರ್ಖನಿಗೆ ನಾಶವು, [QE][QS]ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ. [QE]
3. [QS]ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. [QE][QS]ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು. [QE]
4. [QS]ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. [QE][QS]ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ. [QE]
5. [QS]ಹಸಿದವನು ಅವರ ಬೆಳೆಯನ್ನು [QE][QS]ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. [QE][QS]ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು. [QE]
6. [QS]ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; [QE][QS]ದುಃಖವು ಭೂಮಿಯಿಂದ ಮೊಳೆಯುವುದಿಲ್ಲ. [QE]
7. [QS]ಜ್ವಾಲೆಗಳು ಮೇಲಕ್ಕೆ ಹಾರುವುದು, [QE][QS]ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ. [QE]
8. [QS](ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; [QE][QS]ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. [QE]
9. [QS]ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, [QE][QS]ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. [QE]
10. [QS]ಭೂಮಿಯ ಮೇಲೆ ಮಳೆಸುರಿಸಿ, [QE][QS]ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ. [QE]
11. [QS]ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, [QE][QS]ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ. [QE]
12. [QS]ಯುಕ್ತಿವಂತರ ಕೈಯಿಂದ ಏನೂ ಆಗದಂತೆ, [QE][QS]ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ. [QE]
13. [QS]ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, [QE][QS]ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ. [QE]
14. [QS]ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, [QE][QS]ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ. [QE]
15. [QS]ಇಂಥವರ ಬಾಯೆಂಬ ಕತ್ತಿಯಿಂದಲೂ, [QE][QS]ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ. [QE]
16. [QS]ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, [QE][QS]ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು. [QE]
17. [QS]ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; [QE][QS]ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ. [QE]
18. [QS]ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; [QE][QS]ಹೊಡೆಯುವ ಕೈಯೇ ವಾಸಿಮಾಡುತ್ತದೆ. [QE]
19. [QS]ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; [QE][QS]ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು. [QE]
20. [QS]ಬರಗಾಲದಲ್ಲಿ ಮರಣದಿಂದಲೂ, [QE][QS]ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು. [QE]
21. [QS]ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; [QE][QS]ವಿನಾಶವುಂಟಾದರೂ ನೀನು ಹೆದರುವುದಿಲ್ಲ. [QE]
22. [QS]ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; [QE][QS]ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ. [QE]
23. [QS]ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; [QE][QS]ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು. [QE]
24. [QS]ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; [QE][QS]ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. [QE]
25. [QS]ನಿನ್ನ ಸಂತಾನವು ದೊಡ್ಡದ್ದೆಂದೂ, [QE][QS]ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ. [QE]
26. [QS]ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, [QE][QS]ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ. [QE]
27. [QS]ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, [QE][QS]ನಿನ್ನಷ್ಟಕ್ಕೆ ನೀನೇ ತಿಳಿದುಕೋ.” [QE]