1. {#1ಬಿಲ್ದದನ ಮೊದಲನೆಯ ಪ್ರತ್ಯುತ್ತರ }
2. [PS]“ಆಗ ಶೂಹ್ಯನಾದ ಬಿಲ್ದದನು ಹೀಗೆಂದನು, [PE][QS]“ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ? [QE]
3. [QS]ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? [QE][QS]ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ? [QE]
4. [QS]ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, [QE][QS]ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ? [QE]
5. [QS]ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, [QE][QS]ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ, [QE]
6. [QS]ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, [QE][QS]ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು. [QE]
7. [QS]ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, [QE][QS]ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು. [QE]
8. [QS]ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, [QE][QS]ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು. [QE]
9. [QS]ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. [QE][QS]ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ. [QE]
10. [QS]ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, [QE][QS]ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ? [QE]
11. [QS]ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? [QE][QS]ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ? [QE]
12. [QS]ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, [QE][QS]ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು. [QE]
13. [QS]ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; [QE][QS]ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು. [QE]
14. [QS]ಅವನ ಭರವಸವು ಭಂಗವಾಗುವುದು, [QE][QS]ಅವನ ಆಶ್ರಯವು ಜೇಡದ ಮನೆಯಂತಿರುವುದು. [QE]
15. [QS]ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; [QE][QS]ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು. [QE]
16. [QS]ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, [QE][QS]ತೋಟದಲ್ಲೆಲ್ಲಾ ಕವಲೊಡೆದು ಹರಡಿ [QE]
17. [QS](ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, [QE][QS]ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು. [QE]
18. [QS]ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, [QE][QS]‘ನಿನ್ನನ್ನು ಕಾಣೆ’ ಎಂದು ಕೂಗುವುದು. [QE]
19. [QS]ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. [QE][QS]ಆಹಾ, ಇದೇ ಅವನ ಗತಿಯ ಸುಖ! [QE]
20. [QS]ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, [QE][QS]ಕೆಡುಕರನ್ನು ಕೈಹಿಡಿಯುವುದಿಲ್ಲ. [QE]
21. [QS]ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, [QE][QS]ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು. [QE]
22. [QS]ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; [QE][QS]ದುಷ್ಟರ ನಿವಾಸವು ನಿರ್ಮೂಲವಾಗುವುದು.” [QE]