1. ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು, [QBR]
2. “ನೀನು ಹೇಳಿದ್ದು ಸತ್ಯವೇ ಸರಿ. [QBR] ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? [QBR]
3. ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, [QBR] ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು. [QBR]
4. ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. [QBR] ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ? [QBR]
5. ಆತನು ಪರ್ವತಗಳನ್ನು ಅರಿಯದಂತೆ ಸರಿಸಿ [QBR] ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ. [QBR]
6. ಭೂಲೋಕವನ್ನು ಕದಲಿಸಿ [QBR] ಅದರ ಸ್ತಂಭಗಳನ್ನು ನಡುಗಿಸುತ್ತಾನೆ. [QBR]
7. ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; [QBR] ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ. [QBR]
8. ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. [QBR] ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ. [QBR]
9. ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, [QBR] ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ. [QBR]
10. ಅಪ್ರಮೇಯ ಮಹಾಕಾರ್ಯಗಳನ್ನೂ, [QBR] ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. [QBR]
11. ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; [QBR] ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ. [QBR]
12. ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? [QBR] ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು? [QBR]
13. ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; [QBR] ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ. [QBR]
14. ನಾನಾದರೋ ದೇವರೊಂದಿಗೆ ವಾದಿಸಿ, [QBR] ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು. [QBR]
15. ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; [QBR] ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು. [QBR]
16. ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, [QBR] ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ. [QBR]
17. ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, [QBR] ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ, [QBR]
18. ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ [QBR] ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ. [QBR]
19. ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. [QBR] ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು. [QBR]
20. ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. [QBR] ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು. [QBR]
21. ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; [QBR] ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ. [QBR]
22. ಎಲ್ಲಾ ಒಂದೇ. ಆದಕಾರಣ ‘ನಾನು, [QBR] ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ. [QBR]
23. ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, [QBR] ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು. [QBR]
24. ಭೂಲೋಕವು ದುಷ್ಟರ ಕೈ ಸೇರಿದೆ; [QBR] ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. [QBR] ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು? [QBR]
25. ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. [QBR] ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ. [QBR]
26. ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, [QBR] ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ. [QBR]
27. ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, [QBR] ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ, [QBR]
28. ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; [QBR] ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ. [QBR]
29. ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. [QBR] ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ? [QBR]
30. ನಾನು ಹಿಮದಿಂದ ಸ್ನಾನಮಾಡಿದರೂ, [QBR] ಚೌಳಿನಿಂದ [* ಚೌಳಿನಿಂದ ಅಥವಾ ಸಾಬೂನಿನಿಂದ.] ನನ್ನ ಕೈಗಳನ್ನು ತೊಳಕೊಂಡರೂ, [QBR]
31. ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, [QBR] ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ. [QBR]
32. ಆತನು ನನ್ನಂಥವನಲ್ಲ, ಮನುಷ್ಯನಲ್ಲ, [QBR] ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ? [QBR]
33. ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, [QBR] ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ. [QBR]
34. ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, [QBR] ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ. [QBR]
35. ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; [QBR] ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.” [PE]