1. {#1ಯೋಬನ ಮೂರನೆಯ ಸಂಭಾಷಣೆ: ಬಿಲ್ದದನಿಗೆ ಪ್ರತ್ಯುತ್ತರ } [QS]ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು, [QE]
2. [QS]“ನೀನು ಹೇಳಿದ್ದು ಸತ್ಯವೇ ಸರಿ. [QE][QS]ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? [QE]
3. [QS]ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, [QE][QS]ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು. [QE]
4. [QS]ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. [QE][QS]ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ? [QE]
5. [QS]ಆತನು ಪರ್ವತಗಳನ್ನು ಅರಿಯದಂತೆ ಸರಿಸಿ [QE][QS]ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ. [QE]
6. [QS]ಭೂಲೋಕವನ್ನು ಕದಲಿಸಿ [QE][QS]ಅದರ ಸ್ತಂಭಗಳನ್ನು ನಡುಗಿಸುತ್ತಾನೆ. [QE]
7. [QS]ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; [QE][QS]ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ. [QE]
8. [QS]ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. [QE][QS]ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ. [QE]
9. [QS]ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, [QE][QS]ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ. [QE]
10. [QS]ಅಪ್ರಮೇಯ ಮಹಾಕಾರ್ಯಗಳನ್ನೂ, [QE][QS]ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. [QE]
11. [QS]ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; [QE][QS]ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ. [QE]
12. [QS]ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? [QE][QS]‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು? [QE]
13. [QS]ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; [QE][QS]ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ. [QE]
14. [QS]ನಾನಾದರೋ ದೇವರೊಂದಿಗೆ ವಾದಿಸಿ, [QE][QS]ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು. [QE]
15. [QS]ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; [QE][QS]ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು. [QE]
16. [QS]ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, [QE][QS]ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ. [QE]
17. [QS]ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, [QE][QS]ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ, [QE]
18. [QS]ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ [QE][QS]ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ. [QE]
19. [QS]ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. [QE][QS]ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು. [QE]
20. [QS]ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. [QE][QS]ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು. [QE]
21. [QS]ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; [QE][QS]ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ. [QE]
22. [QS]ಎಲ್ಲಾ ಒಂದೇ. ಆದಕಾರಣ ‘ನಾನು, [QE][QS]ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ. [QE]
23. [QS]ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, [QE][QS]ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು. [QE]
24. [QS]ಭೂಲೋಕವು ದುಷ್ಟರ ಕೈ ಸೇರಿದೆ; [QE][QS]ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. [QE][QS]ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು? [QE]
25. [QS]ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. [QE][QS]ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ. [QE]
26. [QS]ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, [QE][QS]ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ. [QE]
27. [QS]ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, [QE][QS]ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ, [QE]
28. [QS]ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; [QE][QS]ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ. [QE]
29. [QS]ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. [QE][QS]ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ? [QE]
30. [QS]ನಾನು ಹಿಮದಿಂದ ಸ್ನಾನಮಾಡಿದರೂ, [QE][QS]ಚೌಳಿನಿಂದ[* ಚೌಳಿನಿಂದ ಅಥವಾ ಸಾಬೂನಿನಿಂದ. ] ನನ್ನ ಕೈಗಳನ್ನು ತೊಳಕೊಂಡರೂ, [QE]
31. [QS]ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, [QE][QS]ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ. [QE]
32. [QS]ಆತನು ನನ್ನಂಥವನಲ್ಲ, ಮನುಷ್ಯನಲ್ಲ, [QE][QS]ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ? [QE]
33. [QS]ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, [QE][QS]ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ. [QE]
34. [QS]ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, [QE][QS]ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ. [QE]
35. [QS]ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; [QE][QS]ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.” [QE]