1.
2. [PS]ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು. [PE]{#1ಮಿಡತೆಗಳಿಂದಾದ ಹಾನಿ } [QS]ವೃದ್ಧರೇ, ಇದನ್ನು ಕೇಳಿರಿ, [QE][QS]ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. [QE][QS]ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ [QE][QS]ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ? [QE]
3. [QS]ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, [QE][QS]ಅವರು ತಮ್ಮ ಮಕ್ಕಳಿಗೆ ತಿಳಿಸಲಿ [QE][QS]ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ. [QE]
4. [QS]ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; [QE][QS]ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; [QE][QS]ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು. [QE]
5. [QS]ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! [QE][QS]ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, [QE][QS]ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ. [QE]
6. [QS]ನನ್ನ ದೇಶದ ಮೇಲೆ ಬಲಿಷ್ಠವಾದ [QE][QS]ಹಾಗೂ ಅಸಂಖ್ಯಾತವಾದ ಒಂದು ಜನಾಂಗವು[* ಜನಾಂಗವು ಮಿಡತೆಗಳ ಸೈನ್ಯವು. ] ಏರಿ ಬಂದಿದೆ; [QE][QS]ಅದರ ಹಲ್ಲುಗಳು ಸಿಂಹದ ಹಲ್ಲುಗಳೇ [† ಸಿಂಹದ ಹಲ್ಲುಗಳೇ ಪ್ರಕ 9:7-10 ನೋಡಿರಿ. ]; [QE][QS]ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ. [QE]
7. [QS]ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, [QE][QS]ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. [QE][QS]ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; [QE][QS]ಅದರ ಕೊಂಬೆಗಳು ಬಿಳುಪಾದವು. [QE]
8. [QS]ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ. [QE]
9. [QS]ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. [QE][QS]ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ. [QE]
10. [QS]ಬೆಳೆ ಬೆಳೆಯುವ ಹೊಲವು ಹಾಳಾಗಿದೆ, [QE][QS]ನೆಲವು[‡ ನೆಲವು ದೇಶವು ] ದುಃಖದಲ್ಲಿ ಮುಳುಗಿದೆ. [§ ದುಃಖದಲ್ಲಿ ಮುಳುಗಿದೆ. ಬರುಡಾಗಿದೆ. ] [QE][QS]ಏಕೆಂದರೆ ಧಾನ್ಯವು ನಾಶವಾಗಿದೆ, [QE][QS]ಹೊಸ ದ್ರಾಕ್ಷಾರಸವು ಒಣಗಿದೆ, [QE][QS]ಎಣ್ಣೆಯು ಕೆಟ್ಟುಹೋಗಿದೆ. [QE]
11. [QS]ರೈತರೇ, ರೋದಿಸಿರಿ, [QE][QS]ತೋಟಗಾರರೇ ಗೋಳಾಡಿರಿ, [QE][QS]ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. [QE][QS]ಹೊಲದ ಬೆಳೆಯು ನಾಶವಾಗಿದೆ. [QE]
12. [QS]ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; [QE][QS]ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು [QE][QS]ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. [QE][QS]ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ. [QE]
13. {#1ಜನರನ್ನು ಎಚ್ಚರಿಸಿ ಪ್ರಾರ್ಥನೆಗೆ ಆಹ್ವಾನಿಸಿದ್ದು } [PS]ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! [PE][QS]ಯಜ್ಞವೇದಿಯ ಸೇವಕರೇ, ಗೋಳಾಡಿರಿ. [QE][QS]ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. [QE][QS]ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ. [QE]
14. [QS]ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, [QE][QS]ಪವಿತ್ರ ಸಭೆಯನ್ನು ಸೇರಿಸಿರಿ. [QE][QS]ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ [QE][QS]ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, [QE][QS]ಯೆಹೋವನಿಗೆ ಮೊರೆಯಿಡಿರಿ. [QE]
15. [QS]ಯೆಹೋವನು ಬರುವ ದಿನವು ಸಮೀಪಿಸಿತು. [QE][QS]ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ. [QE]
16. [QS]ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, [QE][QS]ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ! [QE]
17. [QS]ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. [QE][QS]ಉಗ್ರಾಣಗಳು ಬರಿದಾಗಿವೆ. [QE][QS]ಕಣಜಗಳು ಕೆಡವಲ್ಪಟ್ಟಿವೆ, [QE][QS]ಏಕೆಂದರೆ ಧಾನ್ಯವು ಒಣಗಿದೆ. [QE]
18. [QS]ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! [QE][QS]ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. [QE][QS]ಏಕೆಂದರೆ ಅವುಗಳಿಗೆ ಮೇವು ಇಲ್ಲ. [QE][QS]ಕುರಿಹಿಂಡುಗಳು ಕಷ್ಟಪಡುತ್ತವೆ. [QE]
19. [QS]ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; [QE][QS]ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ. [QE]
20. [QS]ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. [QE][QS]ನೀರಿನ ಹೊಳೆಗಳು ಬತ್ತಿಹೋಗಿವೆ. [QE][QS]ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ. [QE]