1. ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
2. {ಮಿಡತೆಗಳಿಂದಾದ ಹಾನಿ} [PS] ವೃದ್ಧರೇ, ಇದನ್ನು ಕೇಳಿರಿ, [QBR] ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. [QBR] ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ [QBR] ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ? [QBR]
3. ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, [QBR] ಅವರು ತಮ್ಮ ಮಕ್ಕಳಿಗೆ ತಿಳಿಸಲಿ [QBR] ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ. [QBR]
4. ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; [QBR] ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; [QBR] ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು. [QBR]
5. ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! [QBR] ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, [QBR] ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ. [QBR]
6. ನನ್ನ ದೇಶದ ಮೇಲೆ ಬಲಿಷ್ಠವಾದ [QBR] ಹಾಗೂ ಅಸಂಖ್ಯಾತವಾದ ಒಂದು ಜನಾಂಗವು [* ಜನಾಂಗವು ಮಿಡತೆಗಳ ಸೈನ್ಯವು.] ಏರಿ ಬಂದಿದೆ; [QBR] ಅದರ ಹಲ್ಲುಗಳು ಸಿಂಹದ ಹಲ್ಲುಗಳೇ [† ಸಿಂಹದ ಹಲ್ಲುಗಳೇ ಪ್ರಕ 9:7-10 ನೋಡಿರಿ.] ; [QBR] ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ. [QBR]
7. ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, [QBR] ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. [QBR] ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; [QBR] ಅದರ ಕೊಂಬೆಗಳು ಬಿಳುಪಾದವು. [QBR]
8. ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ. [QBR]
9. ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. [QBR] ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ. [QBR]
10. ಬೆಳೆ ಬೆಳೆಯುವ ಹೊಲವು ಹಾಳಾಗಿದೆ, [QBR] ನೆಲವು [‡ ನೆಲವು ದೇಶವು ] ದುಃಖದಲ್ಲಿ ಮುಳುಗಿದೆ. [§ ದುಃಖದಲ್ಲಿ ಮುಳುಗಿದೆ. ಬರುಡಾಗಿದೆ.] [QBR] ಏಕೆಂದರೆ ಧಾನ್ಯವು ನಾಶವಾಗಿದೆ, [QBR] ಹೊಸ ದ್ರಾಕ್ಷಾರಸವು ಒಣಗಿದೆ, [QBR] ಎಣ್ಣೆಯು ಕೆಟ್ಟುಹೋಗಿದೆ. [QBR]
11. ರೈತರೇ, ರೋದಿಸಿರಿ, [QBR] ತೋಟಗಾರರೇ ಗೋಳಾಡಿರಿ, [QBR] ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. [QBR] ಹೊಲದ ಬೆಳೆಯು ನಾಶವಾಗಿದೆ. [QBR]
12. ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; [QBR] ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು [QBR] ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. [QBR] ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ. [PS]
13. {ಜನರನ್ನು ಎಚ್ಚರಿಸಿ ಪ್ರಾರ್ಥನೆಗೆ ಆಹ್ವಾನಿಸಿದ್ದು} [PS] ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! [QBR] ಯಜ್ಞವೇದಿಯ ಸೇವಕರೇ, ಗೋಳಾಡಿರಿ. [QBR] ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. [QBR] ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ. [QBR]
14. ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, [QBR] ಪವಿತ್ರ ಸಭೆಯನ್ನು ಸೇರಿಸಿರಿ. [QBR] ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ [QBR] ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, [QBR] ಯೆಹೋವನಿಗೆ ಮೊರೆಯಿಡಿರಿ. [QBR]
15. ಯೆಹೋವನು ಬರುವ ದಿನವು ಸಮೀಪಿಸಿತು. [QBR] ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ. [QBR]
16. ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, [QBR] ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ! [QBR]
17. ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. [QBR] ಉಗ್ರಾಣಗಳು ಬರಿದಾಗಿವೆ. [QBR] ಕಣಜಗಳು ಕೆಡವಲ್ಪಟ್ಟಿವೆ, [QBR] ಏಕೆಂದರೆ ಧಾನ್ಯವು ಒಣಗಿದೆ. [QBR]
18. ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! [QBR] ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. [QBR] ಏಕೆಂದರೆ ಅವುಗಳಿಗೆ ಮೇವು ಇಲ್ಲ. [QBR] ಕುರಿಹಿಂಡುಗಳು ಕಷ್ಟಪಡುತ್ತವೆ. [QBR]
19. ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; [QBR] ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ. [QBR]
20. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. [QBR] ನೀರಿನ ಹೊಳೆಗಳು ಬತ್ತಿಹೋಗಿವೆ. [QBR] ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ. [PE]