1. {#1ಯೆಹೋವನು ಜನಾಂಗಳಿಗೆ ನೀಡುವ ತೀರ್ಪು } [QS]ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, [QE][QS]ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ, [QE]
2. [QS]ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, [QE][QS]ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. [QE][QS]ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. [QE][QS]ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ [QE][QS]ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. [QE][QS]ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು. [QE]
3. [QS]ಹೌದು ನನ್ನ ಜನರಿಗಾಗಿ ಚೀಟುಹಾಕಿ, [QE][QS]ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, [QE][QS]ಬಾಲಕಿಯರನ್ನು ಕುಡಿಯುವ [QE][QS]ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ. [QE]
4. [QS]ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, [QE][QS]ನನ್ನ ವಿರುದ್ಧ ನಿಮಗೆ ಕೋಪವೇಕೆ? [QE][QS]ನನಗೆ ಪ್ರತಿಕಾರ ಮಾಡುವಿರೋ? [QE][QS]ನೀವು ನನಗೆ ಪ್ರತಿಕಾರ ಮಾಡಿದರೆ, [QE][QS]ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು. [QE]
5. [QS]ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, [QE][QS]ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. [QE]
6. [QS]ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. [QE][QS]ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ. [QE]
7. [QS]ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, [QE][QS]ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು. [QE]
8. [QS]ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, [QE][QS]ಯೆಹೂದ್ಯರಿಗೆ ಮಾರುವೆನು. [QE][QS]ಅವರು ಆ ಮಕ್ಕಳನ್ನು ದೂರದ ಜನಾಂಗವಾದ, [QE][QS]ಶೆಬದವರಿಗೆ ಮಾರಿಬಿಡುವರು. [QE][QS]ಯೆಹೋವನೇ ಇದನ್ನು ನುಡಿದಿದ್ದಾನೆ. [QE]
9. {#1ಜನಾಂಗಗಳ ಅಪಜಯ } [QS]ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: [QE][QS]ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, [QE][QS]ಶೂರರನ್ನು ಎಚ್ಚರಪಡಿಸಿರಿ, [QE][QS]ಶೂರರು ಒಟ್ಟುಗೂಡಲಿ, [QE][QS]ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ. [QE]
10. [QS]ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, [QE][QS]ಕತ್ತಿಗಳನ್ನಾಗಿ ಮಾಡಿರಿ. [QE][QS]ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. [QE][QS]ಬಲಹೀನನು, “ನಾನು ಶೂರನು” ಎಂದು ಹೇಳಲಿ. [QE]
11. [QS]ಸುತ್ತಮುತ್ತಲಿನ ಜನಾಂಗಗಳೇ, [QE][QS]ತ್ವರೆಯಾಗಿ ಕೂಡಿಬನ್ನಿರಿ, [QE][QS]ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. [QE][QS]ಯೆಹೋವನೇ, [QE][QS]ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು. [QE]
12. [QS]ಜನಾಂಗಗಳು ಎಚ್ಚೆತ್ತುಕೊಂಡು, [QE][QS]ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. [QE][QS]ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, [QE][QS]ನ್ಯಾಯತೀರಿಸಲು ಆಸೀನನಾಗುವೆನು. [QE]
13. [QS]ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, [QE][QS]ಫಲವು ಪಕ್ವವಾಗಿದೆ. [QE][QS]ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, [QE][QS]ದ್ರಾಕ್ಷಿಯ ಅಲೆಯು ತುಂಬಿದೆ. [QE][QS]ತೊಟ್ಟಿಗಳು ತುಂಬಿ ತುಳುಕುತ್ತಿವೆ. [QE][QS]ಜನಾಂಗಗಳ ದುಷ್ಟತನವು ವಿಪರೀತವಾಗಿದೆ. [QE]
14. [QS]ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. [QE][QS]ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ. [QE]
15. [QS]ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, [QE][QS]ನಕ್ಷತ್ರಗಳು ಕಾಂತಿಗುಂದುತ್ತವೆ. [QE]
16. [QS]ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, [QE][QS]ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. [QE][QS]ಭೂಮಿ ಹಾಗು ಆಕಾಶಗಳು ನಡುಗುತ್ತವೆ, [QE][QS]ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, [QE][QS]ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು. [QE]
17. {#1ದೇವಜನರ ಸೌಭಾಗ್ಯ } [QS]ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. [QE][QS]ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, [QE][QS]ಯೆರೂಸಲೇಮ್ ಪವಿತ್ರವಾಗಿರುವುದು. [QE][QS]ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ. [QE]
18. [QS]ಆ ದಿನದಲ್ಲಿ, [QE][QS]ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, [QE][QS]ಗುಡ್ಡಗಳಿಂದ ಹಾಲು ಹರಿಯುವುದು, [QE][QS]ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, [QE][QS]ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, [QE][QS]ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು. [QE]
19. [QS]ಐಗುಪ್ತ್ಯವು ಹಾಳಾಗುವುದು, [QE][QS]ಎದೋಮ್, ಹಾಳಾದ ಬೆಂಗಾಡಾಗುವುದು, [QE][QS]ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, [QE][QS]ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ. [QE]
20. [QS]ಆದರೆ ಯೆಹೂದವು ಸದಾ ಜನಭರಿತವಾಗಿರುವುದು, [QE][QS]ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು. [QE]
21. [QS]ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ.[* ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಅಥವಾ ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು. ] [QE][QS]ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.[QE]