1. {ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು} PS * ಆದಿ 1:1; 1 ಯೋಹಾ 1:1: ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
|
5. † ಯೋಹಾ 3:19: ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ‡ ಅಥವಾ, ಗ್ರಹಿಸಲಿಲ್ಲ. ಮುಸುಕಲಿಲ್ಲ. PEPS
|
7. ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
|
12. ಆದರೂ ಯಾರಾರು ಆತನನ್ನು § ಅಥವಾ, ಅಂಗೀಕರಿಸಿದರೋ. ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
|
13. ಇವರು ರಕ್ತಸಂಬಂಧದಿಂದಾಗಲಿ, * ಅಥವಾ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. PEPS
|
14. ಆ ವಾಕ್ಯವೆಂಬುವವನು † ದೇಹಧಾರಿಯಾಗಿ, ಮಾಂಸಧಾರಿ, ಅಥವಾ, ಆತ್ಮ ಪ್ರಾಣ, ಶರೀರ ಒಳಗೊಂಡ. ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. PEPS
|
15. ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ ‡ ಯೋಹಾ 1:30; ಮತ್ತಾ 3:11; ಮಾರ್ಕ 1:7; ಲೂಕ 3:16: “ ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. PEPS
|
18. ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ. PS
|
19. {ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಸಾಕ್ಷಿ ಹೇಳಿದ್ದು} PS ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
|
21. ಅದಕ್ಕೆ ಅವರು, “ಹಾಗಾದರೆ ನೀನು ಯಾರು? § ಮಲಾ. 4:5: ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ * ಧರ್ಮೋ 18:15: ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
|
22. ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
|
23. ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, † ಯೆಶಾ 40. 3: ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’ ” ಎಂದು ಉತ್ತರ ಕೊಟ್ಟನು.
|
25. ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
|
26. ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.
|
28. ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು. PEPS
|
29. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ‡ ಯೋಹಾ 1:36; ಆದಿ 22:8; ವಿಮೋ 12:3; ಯೆಶಾ 53:4-12: ಯಜ್ಞದಕುರಿಮರಿ.
|
30. ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
|
31. ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
|
32. ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
|
33. ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ § ಮತ್ತಾ 3:11; ಮಾರ್ಕ 1:8; ಲೂಕ 3:16; ಅ. ಕೃ. 1:5: ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
|
36. ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
|
38. ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
|
39. ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ * ಮೂಲ: ಹತ್ತು ತಾಸಾಗಿತ್ತು. ಸಂಜೆ ನಾಲ್ಕು ಗಂಟೆಯಾಗಿತ್ತು.
|
41. ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ † ಕ್ರಿಸ್ತನು ಎಂದರೆ ಅಭಿಷೇಕ ಹೊಂದಿದವನು, ಬರಬೇಕಾದ ರಕ್ಷಕನು. ಕ್ರಿಸ್ತನು) ಎಂದು ಹೇಳಿ,
|
42. ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ‡ ಪೇತ್ರ ಎಂದರೆ ಗುಂಡು ಅಥವಾ ಬಂಡೆಗಲ್ಲು. ಮತ್ತಾ 16:18: ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) PEPS
|
45. ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
|
47. ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, § ರೋಮಾ. 9:4,6: ಇವನು ನಿಜವಾದ ಇಸ್ರಾಯೇಲನು, * ಕೀರ್ತ 32:2: ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.
|
48. ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.
|
50. ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.
|
51. ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. † ಯೆಹೆ. 1:1: ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ‡ ಆದಿ 28:12: ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. PE
|