ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಹಾನನು
1. {ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು} [PS] ಯೇಸು ಈ ಮಾತುಗಳನ್ನು ಹೇಳಿದ ಮೇಲೆ [* ಯೋಹಾ 11:41:] ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, [† ಯೋಹಾ 12:23; 7:39:] ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
2. ನೀನು ಯಾರಾರನ್ನು ಕೊಟ್ಟಿದ್ದೀಯೋ [‡ ಯೋಹಾ 10:28:] ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.
3. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
4. ನೀನು ನನಗೆ ಕೊಟ್ಟ ಕೆಲಸವನ್ನು ನಾನು [§ ಯೋಹಾ 19:30. ] ನೆರವೇರಿಸಿ [* ಯೋಹಾ 13:31:] ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
5. ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, [† ಯೋಹಾ 1:1,2:] ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. [PE][PS]
6. “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
7. ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
8. ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು [‡ ಯೋಹಾ 8:42; 16:27:] ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
9. ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10. ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11. ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, [§ ಯೋಹಾ 10:30. ] ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12. ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. [* ಯೋಹಾ 18:9; 6:39; 10:28; ಕೀರ್ತ 109:8; ಅ. ಕೃ. 1:20:] ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. [PE][PS]
13. “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ [† ಯೋಹಾ 15:11:] ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
14. ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
15. ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17. ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
18. [‡ ಯೋಹಾ 20:21:] ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19. ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. [PS]
20. {ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು} [PS] “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
21. ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ [§ 1 ಯೋಹಾ 1:3:] ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
22. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
24. ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, [* ಎಫೆ 1:4; 1 ಪೇತ್ರ. 1:20:] ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
25. ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
26. ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, [† ಯೋಹಾ 15:9:] ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು. [PE]

Notes

No Verse Added

Total 21 Chapters, Current Chapter 17 of Total Chapters 21
1 2 3 4 5 6 7 8
9 10 11 12 13 14 15 16 17 18 19 20 21
ಯೋಹಾನನು 17:10
1. {ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು} PS ಯೇಸು ಮಾತುಗಳನ್ನು ಹೇಳಿದ ಮೇಲೆ * ಯೋಹಾ 11:41: ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಯೋಹಾ 12:23; 7:39: ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
2. ನೀನು ಯಾರಾರನ್ನು ಕೊಟ್ಟಿದ್ದೀಯೋ ಯೋಹಾ 10:28: ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.
3. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
4. ನೀನು ನನಗೆ ಕೊಟ್ಟ ಕೆಲಸವನ್ನು ನಾನು § ಯೋಹಾ 19:30. ನೆರವೇರಿಸಿ * ಯೋಹಾ 13:31: ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
5. ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ಯೋಹಾ 1:1,2: ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. PEPS
6. “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
7. ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
8. ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ಯೋಹಾ 8:42; 16:27: ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
9. ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10. ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11. ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, § ಯೋಹಾ 10:30. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12. ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. * ಯೋಹಾ 18:9; 6:39; 10:28; ಕೀರ್ತ 109:8; ಅ. ಕೃ. 1:20: ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. PEPS
13. “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ಯೋಹಾ 15:11: ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಮಾತುಗಳನ್ನಾಡುತ್ತಿದೇನೆ.
14. ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
15. ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17. ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
18. ಯೋಹಾ 20:21: ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19. ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. PS
20. {ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು} PS “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
21. ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ § 1 ಯೋಹಾ 1:3: ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
22. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
24. ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, * ಎಫೆ 1:4; 1 ಪೇತ್ರ. 1:20: ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
25. ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
26. ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ಯೋಹಾ 15:9: ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು. PE
Total 21 Chapters, Current Chapter 17 of Total Chapters 21
1 2 3 4 5 6 7 8
9 10 11 12 13 14 15 16 17 18 19 20 21
×

Alert

×

kannada Letters Keypad References