1. {#1ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು } [PS]ಯೇಸು ಈ ಮಾತುಗಳನ್ನು ಹೇಳಿದ ಮೇಲೆ [* ಯೋಹಾ 11:41: ]ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, [SCJ]“ತಂದೆಯೇ,[SCJ.] [† ಯೋಹಾ 12:23; 7:39: ][SCJ]ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.[SCJ.]
2. [SCJ]ನೀನು ಯಾರಾರನ್ನು ಕೊಟ್ಟಿದ್ದೀಯೋ[SCJ.][‡ ಯೋಹಾ 10:28: ][SCJ]ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.[SCJ.]
3. [SCJ]ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.[SCJ.]
4. [SCJ]ನೀನು ನನಗೆ ಕೊಟ್ಟ ಕೆಲಸವನ್ನು ನಾನು[SCJ.][§ ಯೋಹಾ 19:30. ][SCJ]ನೆರವೇರಿಸಿ[SCJ.] [* ಯೋಹಾ 13:31: ][SCJ]ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.[SCJ.]
5. [SCJ]ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,[SCJ.][† ಯೋಹಾ 1:1,2: ][SCJ]ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.[SCJ.] [PE]
6. [PS] [SCJ]“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.[SCJ.]
7. [SCJ]ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.[SCJ.]
8. [SCJ]ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು[SCJ.][‡ ಯೋಹಾ 8:42; 16:27: ][SCJ]ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.[SCJ.]
9. [SCJ]ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.[SCJ.]
10. [SCJ]ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.[SCJ.]
11. [SCJ]ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,[SCJ.][§ ಯೋಹಾ 10:30. ][SCJ]ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.[SCJ.]
12. [SCJ]ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.[SCJ.][* ಯೋಹಾ 18:9; 6:39; 10:28; ಕೀರ್ತ 109:8; ಅ. ಕೃ. 1:20: ][SCJ]ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.[SCJ.] [PE]
13. [PS] [SCJ]“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ[SCJ.][† ಯೋಹಾ 15:11: ][SCJ]ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.[SCJ.]
14. [SCJ]ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.[SCJ.]
15. [SCJ]ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.[SCJ.]
16. [SCJ]ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.[SCJ.]
17. [SCJ]ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.[SCJ.]
18. [‡ ಯೋಹಾ 20:21: ][SCJ]ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.[SCJ.]
19. [SCJ]ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.[SCJ.] [PE]
20. {#1ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು } [PS] [SCJ]“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.[SCJ.]
21. [SCJ]ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ[SCJ.][§ 1 ಯೋಹಾ 1:3: ][SCJ]ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.[SCJ.]
22. [SCJ]ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.[SCJ.]
23. [SCJ]ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.[SCJ.]
24. [SCJ]ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,[SCJ.][* ಎಫೆ 1:4; 1 ಪೇತ್ರ. 1:20: ][SCJ]ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.[SCJ.]
25. [SCJ]ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.[SCJ.]
26. [SCJ]ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,[SCJ.][† ಯೋಹಾ 15:9: ][SCJ]ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ”[SCJ.] ಎಂದನು. [PE]