1. {ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಟ್ಟದ್ದು} (ಮತ್ತಾ 26:47-56; ಮಾರ್ಕ 14:45-50; ಲೂಕ 22:47-58) PS ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
|
2. ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
|
3. ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
|
4. ಆಗ ಯೇಸು * ಯೋಹಾ 13:1: ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
|
5. ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
|
7. ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
|
8. ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
|
9. ಹೀಗೆ † ಯೋಹಾ 17:12: “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
|
10. ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
|
11. ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ‡ ಕತ್ತಿಯ ಕೋಶ, ಅಥವಾ, ಕತ್ತಿಯನ್ನು ಇಡಲು ಚರ್ಮದಿಂದ ಮಾಡಿದ ಚೀಲ. ಒರೆಯಲ್ಲಿ ಹಾಕು. § ಮತ್ತಾ 20:22; 26:42; ಮಾರ್ಕ 14:36; ಲೂಕ 22:42: ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು. ಮಹಾಯಾಜಕನು ಯೇಸುವನ್ನು ವಿಚಾರಿಸಿದ್ದು; ಪೇತ್ರನು ಆತನನ್ನು ನಾನರಿಯೆ ಎಂದು ಹೇಳಿದ್ದು (ಮತ್ತಾ 26:69-75; ಮಾರ್ಕ 14:66-72; ಲೂಕ 22:54-62) PS
|
12. ಆಮೇಲೆ ಆ ಸೈನಿಕರ ಗುಂಪು ಮತ್ತು * ಅಥವಾ, ಸೈನ್ಯಾಧಿಕಾರಿ. ಸಹಸ್ರಾಧಿಪತಿಯೂ, ಯೆಹೂದ್ಯರ † ಅಥವಾ, ಕಾವಲಾಳುಗಳೂ. ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
|
14. ‡ ಯೋಹಾ 11:5 0. ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು. PEPS
|
15. ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
|
16. ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
|
17. ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
|
18. ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು. PEPS
|
20. ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
|
21. ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
|
22. ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
|
23. ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
|
24. § ಯೋಹಾ 18:13; ಮತ್ತಾ 26:57: ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
|
25. ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
|
26. ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
|
27. ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು. ಮತ್ತಾ 27:2,11-26; ಮಾರ್ಕ 15:1-15; ಲೂಕ 23:1-25 PEPS
|
28. {ಪಿಲಾತನು ಯೇಸುವನ್ನು ವಿಚಾರಿಸಿ ಆತನಿಗೆ ಮರಣ ದಂಡನೆಯನ್ನು ವಿಧಿಸಿದ್ದು} PS ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ * ಅಥವಾ, ರಾಜ್ಯಪಾಲನ ನಿವಾಸಕ್ಕೆ. ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ † ಅಥವಾ, ಅಶುದ್ಧವಾದ, ಮಡಿಗೆಟ್ಟು. ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
|
30. ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
|
31. ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
|
32. ‡ ಯೋಹಾ 12:32,33; ಮತ್ತಾ 20:19; 26:2; ಮಾರ್ಕ 10:33; ಲೂಕ 18:32: ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು. PEPS
|
34. ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.
|
35. ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,
|
36. ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
|
37. ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
|
38. ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
|
39. ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
|
40. ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು. PE
|