1. {ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ} PS ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
|
3. ಅಲ್ಲಿ ದ್ರಾಕ್ಷಾರಸವು * ಅಥವಾ, ಮುಗಿದುಹೋದಾಗ, ಕಡಿಮೆ ಆಗಿರುವಾಗ. ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
|
4. ಯೇಸು ಆಕೆಗೆ † ಮೂಲ: ಸ್ತ್ರೀ ಎಂದು. “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
|
6. ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ‡ ಒಂದು ಅಳತೆ, ಸುಮಾರು 40 ಲೀಟರ್ ದ್ರವ ಹಿಡಿಯುವ ಪಾತ್ರೆ. ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
|
8. ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
|
9. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
|
10. “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
|
11. ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು. PS
|
12. {ಯೇಸು ದೇವಾಲಯದಲ್ಲಿ ವ್ಯಾಪಾರವನ್ನು ನಿಲ್ಲಿಸಿದ್ದು} PS ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು. PEPS
|
14. ಆತನು § ಮತ್ತಾ 21:12,13; ಮಾರ್ಕ 11:15-17; ಲೂಕ 19:45,46: ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
|
15. ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
|
16. ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
|
17. ಆಗ * ಕೀರ್ತ 69:9: “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
|
18. ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
|
19. ಅದಕ್ಕೆ ಯೇಸು † ಮತ್ತಾ 26:61: “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
|
20. ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
|
22. ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. PS
|
23. {ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು} PS ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
|
25. ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. PE
|