2. ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
|
3. ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು * ಅಥವಾ, ಮೇಲಿನಿಂದ. ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
|
4. ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
|
5. ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
|
8. ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು. PEPS
|
11. ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
|
12. ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
|
13. † ಜ್ಞಾ. 30. 4; 1 ಕೊರಿ 15:47; ಎಫೆ 4:9: ಪರಲೋಕದಿಂದ ಇಳಿದು ಬಂದವನೇ, ಅಂದರೆ, ‡ ಕೆಲವು ಪ್ರತಿಗಳಲ್ಲಿ, ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಎಂದು ಬರೆದದೆ. ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
|
14. ಇದಲ್ಲದೆ § ಅರಣ್ಯ 21:8,9. ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
|
16. “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
|
17. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
|
18. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
|
19. ಆ ತೀರ್ಪು ಏನೆಂದರೆ * ಯೋಹಾ 1:4, 5; ಎಫೆ 5:8: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
|
20. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
|
21. ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.” PS
|
22. {ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಪುನಃ ಸಾಕ್ಷಿ ಹೇಳಿದ್ದು} PS ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, † ಯೋಹಾ 4:1, 2: ದೀಕ್ಷಾಸ್ನಾನ ಕೊಡುತ್ತಿದ್ದನು.
|
23. ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
|
26. ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
|
28. § ಯೋಹಾ 1:20, 33; ಮತ್ತಾ 3:3,11. ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
|
29. ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
|
31. * ರೋಮಾ. 9:5; 1 ಕೊರಿ 15:47: ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
|
34. ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
|
36. ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” PE
|