ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋನ
1. {#1ಯೋನನ ಪ್ರಾರ್ಥನೆ }
2. [PS]ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: [PE][QS]“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; [QE][QS2]ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; [QE][QS2]ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! [QE][QS2]ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. [QE]
3. [QS]ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; [QE][QS2]ಪ್ರವಾಹವು ನನ್ನನ್ನು ಸುತ್ತಿಕೊಂಡಿತು; [QE][QS2]ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು [QE]
4. [QS]‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; [QE][QS2]ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’ [QE]
5. [QS]ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, [QE][QS2]ಮಹಾಸಾಗರವು ನನ್ನನ್ನು ಆವರಿಸಿತು, [QE][QS2]ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು. [QE]
6. [QS]ಪರ್ವತಗಳ ತಳಹದಿಗೆ ಇಳಿದುಹೋದೆನು, [QE][QS2]ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; [QE][QS2]ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ. [QE]
7. [QS]“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; [QE][QS2]ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು. [QE]
8. [QS]“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು [QE][QS2]ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು. [QE]
9. [QS]ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, [QE][QS2]ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. [QE][QS2]ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.” [QE]
10. [PS]ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
ಯೋನನ ಪ್ರಾರ್ಥನೆ 1 2 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. 3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು 4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’ 5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು. 6 ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ. 7 “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು. 8 “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು. 9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.” 10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
×

Alert

×

Kannada Letters Keypad References