ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಹೋಶುವ
1. {#1ಯೊರ್ದನಿನ ಪಶ್ಚಿಮದಲ್ಲಿರುವ ಪ್ರದೇಶವನ್ನು ಉಳಿದ ಇಸ್ರಾಯೇಲರಿಗೆ ಹಂಚಿಕೊಟ್ಟದ್ದು } [PS]ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
2. ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
3. ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
4. ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
5. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು. [PE]
6. {#1ಕಾಲೇಬನ ಸ್ವತ್ತು } [PS]ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
7. ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
8. ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
9. ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
10. ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
11. ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
12. ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
13. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
14. ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
15. ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು. [PE]
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 24
ಯೊರ್ದನಿನ ಪಶ್ಚಿಮದಲ್ಲಿರುವ ಪ್ರದೇಶವನ್ನು ಉಳಿದ ಇಸ್ರಾಯೇಲರಿಗೆ ಹಂಚಿಕೊಟ್ಟದ್ದು 1 ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ 2 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು 3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ. 4 ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ. 5 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು. ಕಾಲೇಬನ ಸ್ವತ್ತು 6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ. 7 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು. 8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ. 9 ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು. 10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ. 11 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ. 12 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು. 13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು. 14 ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ. 15 ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 24
×

Alert

×

Kannada Letters Keypad References