1. {ಯೆಹೂದ ಕುಲದ ಸ್ವತ್ತು} PS ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.
|
3. ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,
|
5. ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ
|
7. ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ
|
8. ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.
|
9. ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
|
10. ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
|
11. ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
|
13. {ಕಾಲೇಬನಿಗೆ ಕೊಡಲಾದ ಹೆಬ್ರೋನ್} PS ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
|
16. ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
|
17. ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.
|
18. ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು
|
19. ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು. PS
|
36. ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
|
47. ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.
|
63. ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ. PE
|