1. {ಸಿಮೆಯೋನ್ ಕುಲದವರ ಸ್ವಾಸ್ತ್ಯ} PS ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
|
8. ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. PEPS ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.
|
9. ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು. PEPS
|
11. ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.
|
12. ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
|
13. ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್ಹೇಫೆರನ್ನು ಎತ್ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.
|
14. ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
|
15. ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
|
17. {ಇಸ್ಸಾಕಾರ್ ಕುಲದ ಸ್ವಾಸ್ತ್ಯ} PS ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:
|
22. ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
|
24. {ಆಶೇರ್ ಕುಲದವರ ಸ್ವಾಸ್ತ್ಯ} PS ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: -
|
26. ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,
|
27. ಬೇತ್ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು
|
29. ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.
|
32. {ನಫ್ತಾಲಿ ಕುಲದವರ ಸ್ವಾಸ್ತ್ಯ} PS ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
|
33. ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
|
34. ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.
|
38. ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
|
40. {ದಾನ್ ಕುಲದವರ ಸ್ವಾಸ್ತ್ಯ} PS ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:
|
47. ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.
|
49. {ಯೆಹೋಶುವನ ಸ್ವಾಸ್ತ್ಯ} PS ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.
|
50. ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.
|
51. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು. PE
|