1. {ಯೊರ್ದನ್ ನದಿಯನ್ನು ದಾಟಿದ್ದು} PS ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
|
3. “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.
|
4. ಆದರೆ ನಿಮಗೂ ಮಂಜೂಷಕ್ಕೂ ಸುಮಾರು * ಸುಮಾರು ಒಂದು ಕಿಲೋ ಮೀಟರ್. ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
|
5. ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
|
6. ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು. PEPS
|
7. ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
|
8. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
|
10. “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
|
13. ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು. PEPS
|
14. ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
|
15. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.
|
16. ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
|
17. ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು. PE
|