1. {ಯೆರಿಕೋವಿನ ಪತನ} PS ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.
|
2. ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.
|
4. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.
|
5. ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು. PEPS
|
6. ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.
|
7. ಮತ್ತು ಅವನು ಜನರಿಗೆ “ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ” ಎಂದು ಹೇಳಿದನು.
|
8. ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.
|
9. ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.
|
10. ಯೆಹೋಶುವನು ಜನರಿಗೆ “ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ” ಎಂದು ಆಜ್ಞಾಪಿಸಿದನು.
|
11. ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು. PEPS
|
13. ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.
|
15. ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.
|
16. ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.
|
17. ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.
|
18. ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.
|
19. ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.
|
20. ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.
|
21. ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು. PEPS
|
22. ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು
|
23. ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.
|
24. ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.
|
25. ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ. PEPS
|
26. ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ
“ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು. PEPS |