1. {#1ಪೀಠಿಕೆ } [PS]ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ [* 1 ಥೆಸ. 1:4; 2 ಥೆಸ. 2:13: ]ದೇವರಲ್ಲಿ ಪ್ರಿಯರಾದವರಿಗೆ, [† ಯೋಹಾ 17:11, 15; 1 ಥೆಸ. 5:23: ]ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,
2. ನಿಮಗೆ [‡ 2 ಯೋಹಾ 3: ]ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ. [PE]
3. {#1ದುರ್ಬೋಧಕರು } [PS]ಪ್ರಿಯರೇ, [§ ತೀತ. 1:4: ]ನಮಗೆ [* ಅಥವಾ, ಹಂಚಿಕೊಳ್ಳುವ. ]ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು [† 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27: ]ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
4. ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು [‡ ತೀತ. 1:16; 2 ಪೇತ್ರ. 2:1; 1 ಯೋಹಾ 2:22: ]ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. [§ 1 ಪೇತ್ರ. 2:8: ]ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. [PE]
5. [PS]ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು [* 2 ಪೇತ್ರ. 1:12: ]ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ [† ಅರಣ್ಯ 14:29, 37; 26:64, 65; ಕೀರ್ತ 106:26; ಇಬ್ರಿ. 3:17-19: ]ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
6. ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ [‡ 2 ಪೇತ್ರ. 2:4. ಪ್ರಕ 20:2: ]ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
7. [§ ಆದಿ 19:24: ]ಸೊದೋಮ್ ಗೊಮೋರ ಪಟ್ಟಣಗಳವರೂ, [* ಆದಿ 10:19; 14:2, 8; ಧರ್ಮೋ 29:23; ಹೋಶೇ. 11:8: ]ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, [† 2 ಪೇತ್ರ. 2:10. ಸಲಿಂಗಕಾಮಿಗಳಾಗಿದ್ದರು. ]ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
8. ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
9. ಆದರೂ [‡ 1 ಥೆಸ. 4:16: ]ಪ್ರಧಾನ ದೇವದೂತನಾದ [§ ದಾನಿ. 10:13; 12:1; ಪ್ರಕ 12:7: ]ಮೀಕಾಯೇಲನು [* ಧರ್ಮೋ 34:6: ]ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, [† 2 ಪೇತ್ರ. 2:11: ]ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, [‡ ಜೆಕ. 3:2: ]“ಕರ್ತನು ನಿನ್ನನ್ನು ಗದರಿಸಲಿ” ಎಂದನು.
10. ಆದರೆ ಈ ಜನರು [§ 2 ಪೇತ್ರ. 2:12: ]ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11. ಅವರ ಗತಿಯನ್ನು ಏನೆಂದು ಹೇಳಲಿ? ಇವರು [* ಆದಿ 4:5-8: ]ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ [† ಅರಣ್ಯ 31:15, 16; 2 ಪೇತ್ರ. 2:15: ]ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, [‡ ಅರಣ್ಯ 16:1-35: ]ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
12. ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, [§ ಅಥವಾ, ಕಳಂಕಕ್ಕೆ ಕಾರಣರಾಗಿದ್ದು. ]ನಿಮ್ಮ [* 2 ಪೇತ್ರ. 2:13: ]ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. [† ಯೆಹೆ. 34:2, 8, 10: ]ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು [‡ ಎಫೆ 4:14; ಇಬ್ರಿ. 13:9: ]ಗಾಳಿಯಿಂದ ಬಡಿಸಿಕೊಂಡು ಹೋಗುವ [§ 2 ಪೇತ್ರ. 2:17: ]ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, [* ಎರಡು ಸಾರಿ ಸತ್ತ. ]ಸಂಪೂರ್ಣವಾಗಿ ಸತ್ತ, [† ಮತ್ತಾ 15:13: ]ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.
13. [‡ ಫಿಲಿ. 3:19: ]ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ [§ ಯೆಶಾ 57:20: ]ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ [* 2 ಪೇತ್ರ. 2:17: ]ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. [PE]
14. [PS]ಇಂಥವರ ವಿಷಯದಲ್ಲೇ [† ಆದಿ 5:18: ]ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, [‡ ಧರ್ಮೋ 33:2; ದಾನಿ. 7:10; ಜೆಕ. 14:5; ಮಾರ್ಕ 8:38; 1 ಥೆಸ. 3:13; 2 ಥೆಸ. 1:7: ]“ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
15. [§ 2 ಪೇತ್ರ. 2:5: ]ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು. [PE]
16.
2. [PS]ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, [* 2 ಪೇತ್ರ. 2:10: ]ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, [† 2 ಪೇತ್ರ. 2:18: ]ಬಂಡಾಯಿಕೊಚ್ಚಿಕೊಳ್ಳುವವರು, [‡ ಯಾಜ 19:5; ಧರ್ಮೋ 10:17: ]ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ. [PE]{#1ಎಚ್ಚರಿಕೆಗಳೂ ಪ್ರಬೋಧನೆಗಳೂ } [PS]ಪ್ರಿಯರೇ, [§ 2 ಪೇತ್ರ. 3:2: ]ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
18. [* 2 ಪೇತ್ರ. 3:3: ]“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
19. ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, [† 1 ಕೊರಿ 2:14: ]ಪ್ರಾಕೃತ ಮನುಷ್ಯರೂ, [‡ ರೋಮಾ. 8:9; ಫಿಲಿ. 3:3: ]ದೇವರಾತ್ಮ ಇಲ್ಲದವರೂ ಆಗಿದ್ದಾರೆ.
20. ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ [§ ಕೊಲೊ 2:7: ]ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, [* ಎಫೆ 6:18; ರೋಮಾ. 8:26: ]ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.
21. [† ತೀತ. 2:13; 2 ಪೇತ್ರ. 3:12: ]ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, [‡ 2 ಕೊರಿ 13:14; ಅ. ಕೃ. 13:43 ]ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
22. ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,
23. [§ ಆಮೋ. 4:1; ಜೆಕ. 3:2: ]ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು [* 2 ಕೊರಿ 5:11: ]ಭಯಪಡುತ್ತಾ ಕರುಣಿಸಿರಿ. [† ಪ್ರಕ 3:4; ಜೆಕ. 3:4: ]ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. [PE]
24. {#1ಅಂತ್ಯಾಶೀರ್ವಾದ } [PS]ಮುಗ್ಗರಿಸದಂತೆ [‡ ಯೋಹಾ 17:12: ]ನಿಮ್ಮನ್ನು ಕಾಪಾಡಿಕೊಳ್ಳುತ್ತಾ, [§ ಕೊಲೊ 1:22; 1 ಪೇತ್ರ. 4:13: ]ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು [* ಎಫೆ 1:4; 5:27; ಫಿಲಿ. 2, 15; ಪ್ರಕ 14:5: ]ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ [† ರೋಮಾ. 16:25; ಎಫೆ 3:20: ]ಶಕ್ತನಾಗಿರುವ,
25. ನಮ್ಮ ರಕ್ಷಕನಾದ [‡ ಯೋಹಾ 5:44; 1 ತಿಮೊ. 1:17: ]ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, [§ ರೋಮಾ. 11:36: ]ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.[PE]