1. {ಇಸ್ರಾಯೇಲ್ಯರು ಉಳಿದ ಕಾನಾನ್ಯರೊಂದಿಗೆ ಹೋರಾಡಿದ್ದು} PS ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
|
3. ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.
|
4. ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
|
5. ಅವರು ಅಲ್ಲಿ * ಯೆಹೋ. 10:2, ಬೆಜೆಕನ ಅಧಿಪತಿ. ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
|
7. ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು † ಲೂಕ 16:21. ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
|
8. ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
|
9. ‡ ಯೆಹೋ. 10:40. ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು. PEPS
|
10. § ಯೆಹೋ. 15:13-19. ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
|
12. ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
|
13. ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
|
14. ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
|
15. ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು. PEPS
|
16. ಮೋಶೆಯ ಮಾವನಾದ ಕೇನ್ಯನ ವಂಶದವರು * ಯೆರಿಕೋ ಪಟ್ಟಣ. ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
|
17. ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು † ಹೊರ್ಮಾ ಎಂದರೆ ಹಾಳಾದದ್ದು ಎಂದು ಅರ್ಥ. ಹೊರ್ಮಾ ಎಂದು ಕರೆದರು.
|
19. ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
|
20. ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. PEPS
|
21. ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ. PEPS
|
24. ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
|
25. ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
|
26. ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. PEPS
|
27. ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
|
29. ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು. PEPS
|
30. ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು. PEPS
|
31. ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
|
33. ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. PEPS
|
35. ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
|