ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ನ್ಯಾಯಸ್ಥಾಪಕರು
1. {#1ಇಸ್ರಾಯೇಲ್ಯರು ಉಳಿದ ಕಾನಾನ್ಯರೊಂದಿಗೆ ಹೋರಾಡಿದ್ದು } [PS]ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
2. ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.
3. ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.
4. ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
5. ಅವರು ಅಲ್ಲಿ [* ಯೆಹೋ. 10:2, ಬೆಜೆಕನ ಅಧಿಪತಿ. ]ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
6. ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
7. ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು [† ಲೂಕ 16:21. ]ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
8. ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
9. [‡ ಯೆಹೋ. 10:40. ]ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು. [PE]
10. [PS] [§ ಯೆಹೋ. 15:13-19. ]ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
11. ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
12. ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
13. ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
14. ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
15. ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು. [PE]
16. [PS]ಮೋಶೆಯ ಮಾವನಾದ ಕೇನ್ಯನ ವಂಶದವರು [* ಯೆರಿಕೋ ಪಟ್ಟಣ. ]ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
17. ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು [† ಹೊರ್ಮಾ ಎಂದರೆ ಹಾಳಾದದ್ದು ಎಂದು ಅರ್ಥ. ]ಹೊರ್ಮಾ ಎಂದು ಕರೆದರು.
18. ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
19. ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
20. ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. [PE]
21.
22. [PS]ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ. [PE][PS]ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
23. ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.
24. ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
25. ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
26. ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. [PE]
27. [PS]ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
28. ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ. [PE]
29.
30. [PS]ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು. [PE]
31. [PS]ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು. [PE][PS]ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
32. ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು. [PE]
33.
34. [PS]ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. [PE][PS]ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
35. ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
36. ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ. [PE]
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 21
1 2 3 4 5 6 7 8 9
ಇಸ್ರಾಯೇಲ್ಯರು ಉಳಿದ ಕಾನಾನ್ಯರೊಂದಿಗೆ ಹೋರಾಡಿದ್ದು 1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು 2 ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು. 3 ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು. 4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು. 5 ಅವರು ಅಲ್ಲಿ * ಯೆಹೋ. 10:2, ಬೆಜೆಕನ ಅಧಿಪತಿ. ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು. 6 ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. 7 ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ಲೂಕ 16: 21. ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು. 8 ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು. 9 ಯೆಹೋ. 10: 40. ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು. 10 § ಯೆಹೋ. 15:13- 19. ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು. 11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು. 12 ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು. 13 ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು. 14 ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು 15 ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು. 16 ಮೋಶೆಯ ಮಾವನಾದ ಕೇನ್ಯನ ವಂಶದವರು * ಯೆರಿಕೋ ಪಟ್ಟಣ. ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು. 17 ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದರೆ ಹಾಳಾದದ್ದು ಎಂದು ಅರ್ಥ. ಹೊರ್ಮಾ ಎಂದು ಕರೆದರು. 18 ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು. 19 ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ. 20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. 21 22 ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ. ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು. 23 ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು. 24 ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. 25 ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು. 26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. 27 ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು. 28 ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ. 29 30 ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು. 31 ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು. ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ; 32 ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು. 33 34 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು. 35 ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು. 36 ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 21
1 2 3 4 5 6 7 8 9
×

Alert

×

Kannada Letters Keypad References