1. {ತೋಲಾ} PS ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.
|
3. {ಯಾಯೀರ್} PS ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.
|
4. ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ * ಧರ್ಮೋ 3:14. ಯಾಯೀರನ ಗ್ರಾಮಗಳೆಂದು ಹೆಸರಿದೆ.
|
6. {ಅಮ್ಮೋನಿಯರ ಕಾಟವು} PS ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, † 1 ಅರಸು. 11:5,7,33. ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ‡ ಧರ್ಮೋ 31:16. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
|
8. ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.
|
9. ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.
|
10. ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.
|
11. ಆತನು ಅವರಿಗೆ, “ § ವಿಮೋ 14:30; ಅರಣ್ಯ 21:21-32. ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ
|
13. * ಯೆರೆ 2:13. ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
|
14. † ಧರ್ಮೋ 32:37-38. ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.
|
15. ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
|
17. ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
|
18. ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. PE
|