1. {ಗಿಲ್ಯಾದಿನವರ ನಾಯಕನಾದ ಯೆಫ್ತಾಹ} PS ಗಿಲ್ಯಾದ್ಯನಾದ * ಇಬ್ರಿ 11:32. ಯೆಪ್ತಾಹನು † 2 ಅರಸು. 5:1. ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
|
2. ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
|
7. ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು
|
8. ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.
|
9. ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು
|
10. ಅವರು ಅವನಿಗೆ, “ಹಾಗೆಯೇ ಮಾಡುವೆವು; ‡ ಯೆರೆ 42:5. ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
|
11. ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು. PEPS
|
12. ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
|
13. ಆ ಅರಸನು ದೂತರಿಗೆ, “ § ಅರಣ್ಯ 21:24. ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.
|
15. “ಯೆಪ್ತಾಹನಾದ ನನ್ನ ಮಾತನ್ನು ಕೇಳು; * ಧರ್ಮೋ 2:9,19. ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
|
17. ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
|
18. ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
|
19. ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
|
20. ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
|
21. ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
|
22. ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
|
23. ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?
|
24. ನಿನ್ನ ದೇವನಾದ † 1 ಅರಸು. 11:7. ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
|
25. ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ‡ ಅರಣ್ಯ 22:24. ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
|
26. ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
|
27. ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.
|
29. {ಯೆಪ್ತಾಹನು ಅಮ್ಮೋನಿಯರನ್ನು ಸೋಲಿಸಿದ್ದು} PS ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
|
31. ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು * ಯಾಜಕ. 27:2. ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.
|
33. ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು. PS
|
34. {ಯೆಪ್ತಾಹನು ಮಗಳು} PS ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು † ವಿಮೋ 15:20. ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
|
35. ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ‡ ಅರಣ್ಯ 30:2. ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
|
36. ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.
|
37. ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.
|
38. ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
|
39. ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ § ಆಕೆಯು ಸಾಯುವ ತನಕ ಕನ್ಯೆಯಾಗಿ ಯೆಹೋವನಿಗೋಸ್ಕರ ಜೀವಿಸಿದಳು. ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
|
40. ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ. PE
|