1. {ಸಂಸೋನನ ವಿವಾಹವೂ ಒಗಟೂ} PS * ಇಬ್ರಿ. 11:32. ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು
|
2. ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
|
3. ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
|
4. ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. † ನ್ಯಾಯ 13:1; 15:11. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು. PEPS
|
5. ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.
|
6. ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ‡ 1 ಸಮು 11:6. ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
|
8. ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,
|
9. ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ. PS
|
10. {ಸಂಸೋನನ ಒಗಟು} PS ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
|
12. ಸಂಸೋನನು ಇವರಿಗೆ, “ § ಜ್ಞಾನೋ 1:6; ಯೆಹೆ. 17:2. ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ * ಆದಿ 29:27. ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ † 2 ಅರಸು. 5:5. ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
|
13. ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
|
14. ಆಗ ಅವನು,
“ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. PEPS ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು. |
15. ಅವರು ‡ ಅಥವಾ ನಾಲ್ಕನೆಯ ದಿನ. ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
|
16. ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.
|
17. ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
|
18. ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ,
“ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ § ನೀವು ಒಗಟನ್ನು ಬಿಚ್ಚಿದ್ದು ನನ್ನ ಪ್ರಣಯಿನಿಯ ಮೂಲಕ ಎಂಬುದು ಇದರರ್ಥ. ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು. PEPS |
19. ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು * ನ್ಯಾಯ 1:18. ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.
|