ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ನ್ಯಾಯಸ್ಥಾಪಕರು
1. {#1ಸಂಸೋನನ ಪರಾಕ್ರಮ } [PS]ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.
2. ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು [* ಕೀರ್ತ 118:10-12: ಅ.ಕೃ. 9:24. ]ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.
3. ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು. [PE]
4. {#1ಸಂಸೋನನು ದೆಲೀಲಳಿಂದ ನಾಶವಾದದ್ದು } [PS]ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
5. ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ [† ಸುಮಾರು 60 ಕಿಲೋಗ್ರಾಂ. ]ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
6. ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
7. ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.
8. ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.
9. ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು. [PE]
10. [PS]ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.
11. ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.
12. ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. [PE]
13. [PS]ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
14. ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. [PE]
15. [PS]ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
16. ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.
17. ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
18. ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
19. ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
20. ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; [‡ 1 ಸಮು 28:15,16. ]ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
21. ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
22. ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು. [PE]
23. {#1ಸಂಸೋನನ ಮರಣ } [PS]ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ [§ 1 ಸಮು 5:2-7. ]ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
24. ಜನರು ಸಂಸೋನನನ್ನು ನೋಡಿದಾಗ, [PE][QS2]“ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು [QE][QS2]ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು. [QE]
25. [PS]ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
26. ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.
27. ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
28. ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
29. ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
30. “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು. [PE]
31. [PS]ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು. [PE]
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 21
1 2 3 4 5 6 7
8 9 10 11 12 13 14 15 16 17 18 19 20 21
ಸಂಸೋನನ ಪರಾಕ್ರಮ 1 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು. 2 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು * ಕೀರ್ತ 118:10-12: ಅ.ಕೃ. 9: 24. ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು. 3 ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು. ಸಂಸೋನನು ದೆಲೀಲಳಿಂದ ನಾಶವಾದದ್ದು 4 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು. 5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸುಮಾರು 60 ಕಿಲೋಗ್ರಾಂ. ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು. 6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು. 7 ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು. 8 ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು. 9 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು. 10 ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು. 11 ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು. 12 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. 13 ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು. 14 ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. 15 ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು. 16 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು. 17 ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು. 18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು. 19 ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು, 20 ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; 1 ಸಮು 28:15, 16. ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ. 21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು. 22 ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು. ಸಂಸೋನನ ಮರಣ 23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ § 1 ಸಮು 5:2- 7. ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು. 24 ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು. 25 ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು. 26 ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು. 27 ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು. 28 ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು, 29 ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ, 30 “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು. 31 ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 21
1 2 3 4 5 6 7
8 9 10 11 12 13 14 15 16 17 18 19 20 21
×

Alert

×

Kannada Letters Keypad References