1. {ಹತರಾಗದೆ ಉಳಿದ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸಿದ್ದು} PS ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.
|
3. “ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.
|
5. ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.
|
6. ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;
|
7. ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು. PEPS
|
8. ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.
|
10. ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
|
12. ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
|
13. ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.
|
14. ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ. PEPS
|
15. ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
|
16. ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.
|
17. ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.
|
18. ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.
|
19. ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
|
21. ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.
|
22. ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.
|
23. ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು. PEPS
|