1. {ದೇಶದಲ್ಲಿ ಉಳಿದ ಅನ್ಯಜನಾಂಗಗಳು} PS ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
|
2. ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
|
3. * ಯೆಹೋ. 13: 2-6 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
|
4. ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
|
5. † ವಿಮೋ 3:8 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
|
7. {ಒತ್ನೀಯೇಲ್} PS ಇಸ್ರಾಯೇಲರು ಬಾಳ್, ‡ ವಿಮೋ 34:13 ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
|
8. ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು § ಅಂದರೆ ಮೆಸಪೋತಾಮ್ಯ, ಆದಿ 24:10; 25:20. ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ * ಹಬ 3:7 ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
|
9. ಇಸ್ರಾಯೇಲರು † ನ್ಯಾಯ 4:3 ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ‡ ನೆಹೆ 9:27 ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ § ನ್ಯಾಯ 1:13 ಒತ್ನೀಯೇಲನೇ ಆ ರಕ್ಷಕನು.
|
10. * ನ್ಯಾಯ 11:29 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
|
12. {ಏಹೂದ} PS ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ † 1 ಸಮು 12. 9. ವಿರೋಧವಾಗಿ ಬಲಪಡಿಸಿದನು.
|
13. ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
|
15. ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
|
16. ಅವನು ತನಗೋಸ್ಕರ ಒಂದು ಗುದ್ದುಮೊಳ ‡ ಗುದ್ದುಮೊಳ ಒಂದುವರೆ ಅಡಿ. ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
|
19. ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
|
20. ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
|
22. ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; § ಕತ್ತಿಯ ಮೊನಚಾದ ತುದಿಯು ಬೆನ್ನಿನಿಂದ ಹೊರಗೆ ಬಂದಿತ್ತು. ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
|
24. ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
|
25. ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
|
26. ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
|
27. ಎಫ್ರಾಯೀಮ್ ಪರ್ವತಪ್ರದೇಶದಲ್ಲಿ * 1 ಸಮು 13:3 ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
|
28. ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; † 1 ಸಮು 17:47 ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ‡ ಯೆಹೋ. 2:7 ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
|
29. ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
|
31. {ಶಮ್ಗರ್} PS ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು. PE
|