1. {ದೆಬೋರಳ ಜಯಗೀತೆ} [PS] ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು: [QBR]
2. “ [* ಅಥವಾ ಯೆಹೋವನು ಇಸ್ರಾಯೇಲರಿಗಾಗಿ ನೀತಿಯನ್ನು ಸ್ಥಾಪಿಸಿದ್ದಾನೆ.] ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; [QBR2] ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, [QBR2] ಯೆಹೋವನನ್ನು ಕೊಂಡಾಡಿರಿ. [QBR]
3. “ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! [QBR2] ನಾನು ಯೆಹೋವನನ್ನು ಕೀರ್ತಿಸುವೆನು; [QBR2] ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು. [QBR]
4. “ಯೆಹೋವನೇ, ನೀನು ಹೊರಟು [QBR2] ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ [QBR2] [† 2 ಸಮು 22:8; ನಹೂ. 1:5.] ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; [QBR2] ಮೇಘಮಂಡಲವು ಮಳೆಗರೆಯಿತು. [QBR]
5. ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, [QBR2] [‡ ಯೆಶಾ 64: 1] ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು. [QBR]
6. “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, [QBR2] ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. [QBR2] ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು. [QBR]
7. ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ [QBR2] ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು. [QBR]
8. ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; [QBR2] ಯುದ್ಧವು ಉರುಬಾಗಿಲವರೆಗೂ ಬಂದಿತ್ತು. [QBR2] ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ. [QBR]
9. ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, [QBR2] ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; [QBR2] ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ. [QBR]
10. “ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, [QBR2] ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ. [QBR]
11. ಸೇದುವ ಬಾವಿಗಳ ಬಳಿಯಲ್ಲಿ [§ ಸಂಗೀತಗಾರರ.] ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ [QBR2] ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. [QBR2] ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. [QBR2] ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು. [QBR]
12. ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, [QBR2] ಎಚ್ಚರವಾಗು, ಎಚ್ಚರವಾಗಿ ಗಾನಮಾಡು. [QBR2] ಬಾರಾಕನೇ, ಏಳು; [QBR2] ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’ [QBR]
13. “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. [QBR2] ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು. [QBR]
14. ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ [QBR2] ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. [QBR2] ಮಾಕೀರನ ಗೋತ್ರದಿಂದ ಪ್ರಧಾನರೂ [QBR2] ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ [QBR]
15. ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ [QBR2] ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. [QBR2] ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. [QBR2] ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ [QBR]
16. ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, [QBR2] ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? [QBR2] ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ. [QBR]
17. ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. [QBR2] ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? [QBR2] ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು. [QBR]
18. ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, [QBR2] ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು. [QBR]
19. “ಅರಸರು ಬಂದು ಯುದ್ಧಮಾಡಿದರು; [QBR2] ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. [QBR2] ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ. [QBR]
20. ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು. [QBR]
21. ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. [QBR2] ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು. [QBR]
22. ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು. [QBR]
23. ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. [QBR2] ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. [QBR2] ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; [QBR2] ಅವರನ್ನು ಶಪಿಸೇ ಶಪಿಸಿರಿ!’ [QBR]
24. “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. [QBR2] ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು. [QBR]
25. ನೀರು ಕೇಳಿದನು, ಹಾಲು ಕೊಟ್ಟಳು; [QBR2] ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು. [QBR]
26. ಕೈಚಾಚಿ ಗೂಟವನ್ನು ತೆಗೆದುಕೊಂಡಳು; [QBR2] ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; [QBR2] ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. [QBR2] ಅವನ ನೆತ್ತಿಗೆ ತಿವಿದು ಜಡಿದಳು. [QBR]
27. ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; [QBR2] ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. [QBR2] ಅವನು ಬಿದ್ದಲ್ಲೇ ಸತ್ತನು. [QBR]
28. “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; [QBR2] ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. [QBR2] ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! [QBR2] ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು. [QBR]
29. ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ [QBR2] ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ, [QBR]
30. ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. [QBR2] ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, [* ಕೊಳ್ಳೆಯವರ ಕಂಠ.] ಕಂಠಮಾಲೆಯೂ ದೊರಕಿರುತ್ತವೆ.’ [QBR]
31. ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. [QBR2] ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು. [PE]