1. {#1ಯೆರೂಸಲೇಮಿನವರ ದುಃಖ } [QS]ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! [QE][QS]ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, [QE][QS]ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು. [QE]
2. [QS]ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; [QE][QS]ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ. [QE]
3. [QS]ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; [QE][QS]ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; [QE][QS]ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು. [QE]
4. [QS]ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; [QE][QS]ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; [QE][QS]ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ. [QE]
5. [QS]ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, [QE][QS]ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ. [QE]
6. [QS]ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ. [QE]
7. [QS]ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. [QE][QS]ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು. [QE]
8. [QS]ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ. [QE]
9. [QS]ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. [QE][QS]“ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ. [QE]
10. [QS]ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ [QE][QS]ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು. [QE]
11. [QS]ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, [QE][QS]“ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ. [QE]
12. [QS]ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು [QE][QS]ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ [QE][QS]ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ. [QE]
13. [QS]ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; [QE][QS]ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, [QE][QS]ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ. [QE]
14. [QS]ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; [QE][QS]ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ. [QE]
15. [QS]ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. [QE][QS]ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; [QE][QS]ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ. [QE]
16. [QS]ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ [QE][QS]ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು. [QE]
17. [QS]ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು [QE][QS]ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ. [QE]
18. [QS]ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; [QE][QS]ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ! [QE]
19. [QS]ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, [QE][QS]ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು. [QE]
20. [QS]ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. [QE][QS]ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ. [QE]
21. [QS]ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; [QE][QS]ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. [QE][QS]ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ! [QE]
22. [QS]ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; [QE][QS]ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; [QE][QS]ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ. [QE]