1. {#1ಯೆರೂಸಲೇಮಿಗೆ ಯೆಹೋವನು ಕೊಟ್ಟ ಶಿಕ್ಷೆ } [QS]ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! [QE][QS]ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ [QE][QS]ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು. [QE]
2. [QS]ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, [QE][QS]ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, [QE][QS]ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ. [QE]
3. [QS]ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, [QE][QS]ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ. [QE]
4. [QS]ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, [QE][QS]ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; [QE][QS]ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ. [QE]
5. [QS]ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; [QE][QS]ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; [QE][QS]ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ. [QE]
6. [QS]ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; [QE][QS]ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ [QE][QS]ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ. [QE]
7. [QS]ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, [QE][QS]ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; [QE][QS]ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ. [QE]
8. [QS]ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; [QE][QS]ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ. [QE]
9. [QS]ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; [QE][QS]ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; [QE][QS]ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ. [QE]
10. [QS]ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; [QE][QS]ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ. [QE]
11. [QS]ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, [QE][QS]ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ. [QE]
12. [QS]ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, [QE][QS]“ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ. [QE]
13. [QS]ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, [QE][QS]ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? [QE][QS]ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು? [QE]
14. [QS]ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; [QE][QS]ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; [QE][QS]ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು. [QE]
15. [QS]ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, [QE][QS]“ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ. [QE]
16. [QS]ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, [QE][QS]ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. [QE]
17. [QS]ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, [QE][QS]ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ. [QE]
18. [QS]ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; [QE][QS]“ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, [QE][QS]ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ; [QE]
19. [QS]ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, [QE][QS]ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; [QE][QS]ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.” [QE]
20. [QS]ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, [QE][QS]ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! [QE][QS]ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ? [QE]
21. [QS]ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, [QE][QS]ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; [QE][QS]ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ. [QE]
22. [QS]ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು[* ಅಥವಾ ಶತ್ರುಗಳನ್ನು. ] ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; [QE][QS]ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; [QE][QS]ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ. [QE]