1. ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ. [QBR]
2. ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ. [QBR]
3. ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ. [QBR]
4. ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ; [QBR]
5. ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ. [QBR]
6. ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ. [QBR]
7. ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ. [QBR]
8. ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ. [QBR]
9. ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತುವರಿಯುವಂತೆ ಮಾಡಿದ್ದಾನೆ. [QBR]
10. ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ. [QBR]
11. ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿದ್ದಾನೆ. ಆತನು ನನ್ನನ್ನು ದಿಕ್ಕಿಲ್ಲದವನಂತೆ ಮಾಡಿದ್ದಾನೆ. [QBR]
12. ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ. [QBR]
13. ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ. [QBR]
14. ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ. [QBR]
15. ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ. [QBR]
16. ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ. [QBR]
17. ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದೀ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ. [QBR]
18. “ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು. [QBR]
19. ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ. [QBR]
20. ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ. [QBR]
21. ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ! [QBR]
22. ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು. [QBR]
23. ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು! [QBR]
24. “ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ. [QBR]
25. ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. [QBR]
26. ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು. [QBR]
27. ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ. [QBR]
28. ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ. [QBR]
29. ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ. [QBR]
30. ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ. [QBR]
31. ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ. [QBR]
32. ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು. [QBR]
33. ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ. [QBR]
34. ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ, [QBR]
35. ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ, [QBR]
36. ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ? [QBR]
37. ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು? [QBR]
38. ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ. [QBR]
39. ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ? [QBR]
40. ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ. [QBR]
41. ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ. [QBR]
42. “ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ. [QBR]
43. ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ. [QBR]
44. ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ. [QBR]
45. ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ. [QBR]
46. ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ. [QBR]
47. ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.” [QBR]
48. ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು. [QBR]
49. ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ [QBR]
50. ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು. [QBR]
51. ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣುರಿಯಿಂದ ಪೀಡಿತನಾಗಿದ್ದೇನೆ. [QBR]
52. ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು. [QBR]
53. ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ [* ಕಲ್ಲುಮುಚ್ಚಿ ಅಥವಾ ಕಲ್ಲೆಸೆದು ] ನನ್ನ ಪ್ರಾಣವನ್ನು ತೆಗೆದುಬಿಟ್ಟರು [QBR]
54. ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು. [QBR]
55. ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. [QBR]
56. ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ! [QBR]
57. ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ. [QBR]
58. ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ. [QBR]
59. ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು. [QBR]
60. ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ. [QBR]
61. ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ, [QBR]
62. ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ. [QBR]
63. ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ. [QBR]
64. ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ; [QBR]
65. ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ! [QBR]
66. ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ. [PE]