1. {#1ನಾಶವಾದ ಯೆರೂಸಲೇಮಿನ ಪರಿಸ್ಥಿತಿ } [QS]ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! [QE][QS]ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ. [QE]
2. [QS]ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, [QE][QS]ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ. [QE]
3. [QS]ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; [QE][QS]ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ. [QE]
4. [QS]ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. [QE][QS]ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ. [QE]
5. [QS]ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; [QE][QS]ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು. [QE]
6. [QS]ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, [QE][QS]ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ. [QE]
7. [QS]ಆ ಪ್ರಜೆಯಲ್ಲಿನ ಮಹನೀಯರು[* ಮಹನೀಯರು ಮೂಲತಃ ನಜರೇಟ್ಸ್ ಅಥವಾ ನಾಜೀರರು ದ್ರಾಕ್ಷಾರಸವನ್ನು ಕುಡಿಯದಿರಲು, ಮೃತ ದೇಹವನ್ನು ಸ್ಪರ್ಶಿಸದಿರಲು, ಮತ್ತು ಅವನ ಕೂದಲನ್ನು ಉದ್ದವಾಗಿ ಬೆಳೆಯಲು ಬಿಡಲು ವಿಶೇಷ ಶಪಥ ತೆಗೆದುಕೊಂಡವರು. ] ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. [QE][QS]ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು. [QE]
8. [QS]ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. [QE][QS]ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ. [QE]
9. [QS]ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. [QE][QS]ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ. [QE]
10. [QS]ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; [QE][QS]ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು. [QE]
11. [QS]ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; [QE][QS]ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ. [QE]
12. [QS]ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು [QE][QS]ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ. [QE]
13. [QS]ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು. [QE]
14. [QS]ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, [QE][QS]ಅವರ ಬಟ್ಟೆಯನ್ನು ಯಾರೂ ಮುಟ್ಟರು. [QE]
15. [QS]ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. [QE][QS]ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ. [QE]
16. [QS]ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. [QE][QS]ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು. [QE]
17. [QS]ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. [QE][QS]ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ. [QE]
18. [QS]ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; [QE][QS]ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು. [QE]
19. [QS]ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು. [QE]
20. [QS]ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, [QE][QS]ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು. [QE]
21. [QS]ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; [QE][QS]ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ. [QE]
22. [QS]ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. [QE][QS]ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು. [QE]