1. {#1ದಯೆತೋರೆಂದು ಯೆಹೋವನಲ್ಲಿ ಪ್ರಾರ್ಥನೆ } [QS]ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; [QE][QS]ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು. [QE]
2. [QS]ನಮ್ಮ ಸ್ವತ್ತು ಪರರ ಪಾಲಾಗಿದೆ, [QE][QS]ನಮ್ಮ ಮನೆಗಳು ಪರರ ಕೈವಶವಾಗಿವೆ. [QE]
3. [QS]ನಾವು ತಂದೆಯಿಲ್ಲದ ಅನಾಥರು, [QE][QS]ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ. [QE]
4. [QS]ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; [QE][QS]ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ. [QE]
5. [QS]ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ. [QE]
6. [QS]ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ [QE][QS]ಮತ್ತು ಅಶ್ಶೂರ್ಯರಿಗೂ ಅಧೀನರಾದೆವು. [QE]
7. [QS]ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; [QE][QS]ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು. [QE]
8. [QS]ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ. [QE]
9. [QS]ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ. [QE]
10. [QS]ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ. [QE]
11. [QS]ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ. [QE]
12. [QS]ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು. [QE]
13. [QS]ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು. [QE]
14. [QS]ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು. [QE]
15. [QS]ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ. [QE]
16. [QS]ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, [QE][QS]ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ! [QE]
17. [QS]ನಮ್ಮ ಹೃದಯವು ಕುಂದಿದೆ ಮತ್ತು [QE][QS]ನಮ್ಮ ಕಣ್ಣುಗಳು ಮೊಬ್ಬಾಗಿವೆ. [QE]
18. [QS]ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ. [QE]
19. [QS]ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, [QE][QS]ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು. [QE]
20. [QS]ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? [QE][QS]ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ? [QE]
21. [QS]ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? [QE]
22. [QS]ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. [QE][QS]ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;[QE]