1. {ನಾದಾಬ್ ಹಾಗೂ ಅಬೀಹೂರ ಮರಣ} PS ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
|
3. ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ,
‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’ ” ಎಂದು ಹೇಳಿದನು. PEPS ಅದಕ್ಕೆ ಆರೋನನು ಮೌನವಾಗಿದ್ದನು. |
4. ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.
|
5. ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು. PEPS
|
6. ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
|
7. ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು. PS
|
9. “ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
|
10. ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,
|
11. ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು. PEPS
|
12. ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
|
13. ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
|
14. ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.
|
15. ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು. PEPS
|
16. ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
|
17. “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
|
18. ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.
|
19. ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”
|