4. ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
|
9. {ಶುದ್ಧ ಮತ್ತು ಅಶುದ್ಧವಾದ ಜಲಜಂತುಗಳು} PS “ ‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
|
10. ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
|
11. ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
|
13. {ಶುದ್ಧ ಮತ್ತು ಅಶುದ್ಧವಾದ ಪಕ್ಷಿಗಳು} PS “ ‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
|
20. {ನಿಷಿದ್ಧವಾದ ಕ್ರಿಮಿಕೀಟಗಳು} PS “ ‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
|
21. ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
|
22. ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
|
24. {ಅಪವಿತ್ರತೆಯನ್ನು ಉಂಟುಮಾಡುವ ಪ್ರಾಣಿಗಳು} PS “ ‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
|
26. ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
|
27. ಚತುಷ್ಪಾದ * ಚತುಷ್ಪಾದ ನಾಲ್ಕು ಕಾಲುಗಳ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
|
28. ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ. PS
|
29. {ಅಶುದ್ಧವಾದ ಜಂತುಗಳು} PS “ ‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
|
31. ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
|
32. ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
|
33. ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
|
34. ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
|
35. ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
|
36. ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
|
39. “ ‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
|
40. ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. PS
|
41. {ತಿನ್ನಬಾರದ ಕ್ರಿಮಿಕೀಟಗಳು} PS “ ‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
|
42. ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
|
44. ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
|
45. ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. PEPS
|
47. ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’ ” PE
|