ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯಾಜಕಕಾಂಡ
1. {#1ಬಾಣಂತಿಯರ ಶುದ್ಧೀಕರಣ } [PS]ಯೆಹೋವನು ಮೋಶೆಗೆ,
2. “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
3. ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.
4. ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
5. ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು. [PE]
6. [PS]“ ‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
7. ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.
8. ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’ ” ಎಂಬುದೆ. [PE]
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 27
ಬಾಣಂತಿಯರ ಶುದ್ಧೀಕರಣ 1 ಯೆಹೋವನು ಮೋಶೆಗೆ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. 3 ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು. 4 ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು. 5 ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು. 6 “ ‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. 7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ. 8 ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’ ” ಎಂಬುದೆ.
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 27
×

Alert

×

Kannada Letters Keypad References