2. “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
|
4. ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
|
6. “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
|
7. ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
|
8. ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
|
9. ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು. PEPS
|
10. “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ * ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ. ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
|
11. ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
|
12. ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
|
13. ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
|
14. ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
|
17. ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
|
18. ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. PEPS
|
19. “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
|
20. ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. PEPS
|
21. “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ † ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ. ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
|
22. ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
|
23. ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
|
24. ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
|
25. ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
|
28. ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
|
29. ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
|
31. ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. PEPS
|
34. “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
|
35. ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
|
36. ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
|
37. ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
|
41. ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
|
42. ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು. PEPS
|
43. “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
|
45. ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
|
47. ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. PEPS
|
48. “ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
|
49. ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
|
51. ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
|
52. ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
|
53. ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು. PEPS
|