ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯಾಜಕಕಾಂಡ
1. {#1ಧರ್ಮವಿರುದ್ಧವಾದ ಲೈಂಗಿಕ ನಿಯಮಗಳು } [PS]ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2. “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.
3. ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.
4. ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.
5. ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. [PE]
6. [PS]“ ‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
7. ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.
8. ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
9. ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
10. ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
11. ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
12. ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
13. ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
14. ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
15. ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
16. ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
17. ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
18. ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು. [PE]
19. [PS]“ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
20. ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು. [PE]
21.
22. [PS]“ ‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು. [PE][PS]“ ‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
23. ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. [PE]
24. [PS]“ ‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
25. ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
26. ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
27. ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
28. ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.
29. ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
30. ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’ ” ಎಂದು ಹೇಳಿದನು. [PE]
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 27
ಧರ್ಮವಿರುದ್ಧವಾದ ಲೈಂಗಿಕ ನಿಯಮಗಳು 1 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು. 3 ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. 4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು. 5 ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. 6 “ ‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು. 7 ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು. 8 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ. 9 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ. 10 ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ. 11 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ. 12 ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ. 13 ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ. 14 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ. 15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ. 16 ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ. 17 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ. 18 ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು. 19 “ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು. 20 ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು. 21 22 “ ‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು. “ ‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. 23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. 24 “ ‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು. 25 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು. 26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. 27 ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ. 28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ. 29 ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. 30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’ ” ಎಂದು ಹೇಳಿದನು.
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 27
×

Alert

×

Kannada Letters Keypad References