1. {ಧಾನ್ಯ ಸಮರ್ಪಣೆ} PS “ ‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
|
2. ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
|
3. ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ. PEPS
|
4. “ ‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
|
5. ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
|
8. ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
|
9. ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
|
10. ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ. PEPS
|
11. “ ‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
|
12. ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
|
13. ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. * ಅಕ್ಷರಶಃ - ಒಡಂಬಡಿಕೆಯ ಉಪ್ಪು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು. PEPS
|
14. “ ‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, † ಪುಡಿಮಾಡಿದ ಹಿಟ್ಟಿನ ಧಾನ್ಯ. ಉಮ್ಮಿಗೆಯನ್ನು ಸಮರ್ಪಿಸಬೇಕು.
|
16. ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು. PE
|