2. “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
|
3. ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
|
4. ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು. PS
|
5. {ಪವಿತ್ರವಾದ ರೊಟ್ಟಿ} PS “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು * ಆರಾರು ಸೇರಿನದಾಗಿರಬೇಕು ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ. .
|
6. ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
|
7. ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
|
8. ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
|
9. ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು. PS
|
10. {ದೇವದೂಷಕನಿಗೆ ಮರಣಶಿಕ್ಷೆ} PS ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
|
11. ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
|
14. “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
|
16. ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. PEPS
|
18. ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
|
20. ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
|
22. ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’ ” ಎಂಬುದೇ. PEPS
|
23. ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. PE
|