2. “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
|
3. ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ * ಇದು ಯಾಜಕನಿಂದ ನಿರ್ಣಯಿಸಲ್ಪಟ್ಟ ಶೆಕೆಲ್. ಶೆಕೆಲ್ ಅಂದರೆ ಸುಮಾರು 6 ಕಿಲೋಗ್ರಾಂ. ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.
|
5. ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
|
6. ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
|
7. ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
|
8. ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು. PEPS
|
10. ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
|
12. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
|
13. ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. PEPS
|
14. “ ‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
|
15. ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು. PEPS
|
16. “ ‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು † ಆ ಹೊಲದಲ್ಲಿ ಸುಗ್ಗಿಯಿಂದ ಬಂದಷ್ಟು ಬೀಜದ ಬೆಲೆಯನ್ನು ನಿರ್ಣಯಿಸಬೇಕು. ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ‡ ಎರಡು ಖಂಡುಗ. ಹೋಮೆರ್ ಅಂದರೆ 10 ಏಫಾ ಅಥವಾ 300 ಕಿಲೋಗ್ರಾಂ. ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
|
18. ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
|
19. ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
|
21. ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು. PEPS
|
22. “ ‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
|
23. ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
|
24. ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
|
25. § ವಿಮೋ 30:13 ನೋಡಿರಿ. ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು. PEPS
|
26. “ ‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
|
27. ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು. PEPS
|
28. “ ‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
|
29. ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. PS
|
30. {ಯೆಹೋವನಿಗೆ ಸಲ್ಲಿಸಬೇಕಾದ ದಶಮಾಂಶ} PS “ ‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
|
31. ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
|
32. ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
|
33. ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’ ” ಎಂದು ಹೇಳಿದನು. PEPS
|