ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯಾಜಕಕಾಂಡ
1. {ಸಮಾಧಾನಯಜ್ಞ} [PS] “ ‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
2. ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
3. ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
4. ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
5. ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು. [PE][PS]
6. “ ‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
7. ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
8. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
9. ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
10. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
11. ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು. [PE][PS]
12. “ ‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
13. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
14. ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
15. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
16. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
17. ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’ ” ಅಂದನು. [PE]

Notes

No Verse Added

Total 27 Chapters, Current Chapter 3 of Total Chapters 27
ಯಾಜಕಕಾಂಡ 3:24
1. {ಸಮಾಧಾನಯಜ್ಞ} PS “ ‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
2. ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
3. ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
4. ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
5. ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು. PEPS
6. “ ‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
7. ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
8. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
9. ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
10. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
11. ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು. PEPS
12. “ ‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
13. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
14. ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
15. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
16. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
17. ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’ ” ಅಂದನು. PE
Total 27 Chapters, Current Chapter 3 of Total Chapters 27
×

Alert

×

kannada Letters Keypad References