2. “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
|
3. * ಮಹಾಯಾಜಕನು. ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
|
4. ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
|
6. ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
|
7. ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
|
9. ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
|
10. ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
|
12. ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. PS
|
13. {ಇಸ್ರಾಯೇಲ್ ಸಮೂಹದ ದೋಷಪರಿಹಾರ} PS “ ‘ಇಸ್ರಾಯೇಲರ † ಕೂಡಿಬಂದ ಎಲ್ಲಾ ಇಸ್ರಾಯೇಲರು. ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
|
14. ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
|
15. ‡ ಕೂಡಿಬಂದ ಇಸ್ರಾಯೇಲರು. ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
|
18. ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
|
20. ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
|
21. ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ. PS
|
22. {ಮುಖ್ಯಾಧಿಕಾರಿಯ ದೋಷಪರಿಹಾರ} PS “ ‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
|
24. ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
|
25. ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
|
26. ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. PS
|
27. {ಸಾಮಾನ್ಯ ಜನರ ದೋಷಪರಿಹಾರ} PS “ ‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
|
30. ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
|
31. ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. PEPS
|
33. ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
|
34. ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
|
35. ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. PE
|