1. {ಪೀಠಿಕೆ} PS ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
|
3. ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.
|
5. {ದೇವದೂತನು ಸ್ನಾನಿಕನಾದ ಯೋಹಾನನ ಜನನವನ್ನು ಮುಂತಿಳಿಸಿದ್ದು} PS ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
|
6. ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
|
13. ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.
|
15. ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
|
17. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. PEPS
|
18. ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. PEPS
|
19. ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
|
20. ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. PEPS
|
22. ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. PEPS
|
25. “ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು. PS
|
26. {ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು} PS ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;
|
28. ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. PEPS
|
32. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
|
35. ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
|
36. ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.
|
38. ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು. PS
|
39. {ಮರಿಯಳು ಎಲಿಜಬೇತಳನ್ನು ಭೇಟಿಯಾದದ್ದು} PS ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.
|
41. ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. PEPS
|
42. ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.
|
48. ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ.
ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, |
54. (54-55) ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ
ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. |
58. ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
|
59. ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
|
65. ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.
|
66. ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. PS
|
67. {ಜಕರೀಯನ ಪ್ರವಾದನೆ} PS ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,
|
68. “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು;
ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; |
72. (72-73) ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ
ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ. |
74. (74-75) ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು,
ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ. |
76. ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ.
ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ, |
77. (77-78) ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು
ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ, |
79. ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು
ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.” |
80. ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು. PE
|