ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಲೂಕನು
1. {#1ಪ್ರಾರ್ಥನೆಯ ಕುರಿತು ಯೇಸು ಬೋಧಿಸಿದ್ದು [BR]ಮತ್ತಾ 6:9-13; 7:7-11 } [PS]ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.
2. ಅದಕ್ಕಾತನು, [SCJ]“ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ,[SCJ.] [PE][QS][SCJ]“ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.[SCJ.] [QE][QS2][SCJ]ನಿನ್ನ ರಾಜ್ಯವು ಬರಲಿ.[SCJ.] [QE]
3. [QS] [SCJ]ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.[SCJ.] [QE]
4. [QS] [SCJ]ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ[SCJ.] [QE][QS2][SCJ]ನಮ್ಮ ಪಾಪಗಳನ್ನು ಕ್ಷಮಿಸು.[SCJ.] [QE][QS2][SCJ]ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ”[SCJ.] ಅಂದನು. [QE]
5. [PS]ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, [SCJ]“ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.[SCJ.]
6. [SCJ]ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,[SCJ.]
7. [SCJ]ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’[SCJ.]
8. [SCJ]ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.[SCJ.]
9. [SCJ]ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.[SCJ.]
10. [SCJ]ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.[SCJ.]
11. [SCJ]ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?[SCJ.]
12. [SCJ]ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?[SCJ.]
13. [SCJ]ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?”[SCJ.] ಅಂದನು. [PE]
14. {#1ಯೇಸು ಮತ್ತು ಬೆಲ್ಜೆಬೂಲ [BR]ಮತ್ತಾ 12:22-30; ಮಾರ್ಕ 3:20-27 } [PS]ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
15. ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.
16. ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು.
17. ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, [SCJ]“ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.[SCJ.]
18. [SCJ]ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,[SCJ.]
19. [SCJ]ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.[SCJ.]
20. [SCJ]ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.[SCJ.] [PE]
21. [PS] [SCJ]“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;[SCJ.]
22. [SCJ]ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.[SCJ.]
23. [SCJ]ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.[SCJ.] [PE]
24. {#1ದೆವ್ವದ ಮರಳುವಿಕೆ [BR]ಮತ್ತಾ 12:43-45 } [PS] [SCJ]“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,[SCJ.]
25. [SCJ]ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,[SCJ.]
26. [SCJ]ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು”[SCJ.] ಅಂದನು. [PE]
27. {#1ನಿಜವಾದ ಆನಂದ } [PS]ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
28. ಅದಕ್ಕೆ ಯೇಸು, [SCJ]“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”[SCJ.] ಅಂದನು. [PE]
29. {#1ಸೂಚಕಕಾರ್ಯದ ಗುರುತಿಗಾಗಿ ಬೇಡಿಕೆ [BR]ಮತ್ತಾ 12:38-42 } [PS]ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, [SCJ]“ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.[SCJ.]
30. [SCJ]ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.[SCJ.]
31. [SCJ]ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.[SCJ.]
32. [SCJ]ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.[SCJ.] [PE]
33. {#1ದೇಹದ ಬೆಳಕು [BR]ಮತ್ತಾ 5:15; 6:22-23 } [PS] [SCJ]“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.[SCJ.]
34. [SCJ]ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.[SCJ.]
35. [SCJ]ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.[SCJ.]
36. [SCJ]ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು”[SCJ.] ಅಂದನು. [PE]
37. {#1ಯೇಸು ಫರಿಸಾಯರ ಮತ್ತು ಧರ್ಮೋಪದೇಶಕರ ದುರ್ಗುಣಗಳನ್ನು ಖಂಡಿಸಿದ್ದು [BR]ಮತ್ತಾ 23:1-36; ಮಾರ್ಕ 12:38-40 } [PS]ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
38. ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39. ಆದರೆ ಕರ್ತನು ಅವನಿಗೆ, [SCJ]“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.[SCJ.]
40. [SCJ]ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.[SCJ.]
41. [SCJ]ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.[SCJ.] [PE]
42.
43. [PS] [SCJ]“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.[SCJ.] [PE][PS] [SCJ]“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.[SCJ.]
44. [SCJ]ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು”[SCJ.] ಎಂದು ಹೇಳಿದನು. [PE]
45. [PS]ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
46. ಆತನು, [SCJ]“ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.[SCJ.]
47. [SCJ]ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.[SCJ.]
48. [SCJ]ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.[SCJ.]
49. [SCJ]ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’[SCJ.]
50. (50-51) [SCJ]ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.[SCJ.]
51.
52. [SCJ]ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ”[SCJ.] ಅಂದನು. [PE]
53. [PS]ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
54. ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. [PE]
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 24
ಪ್ರಾರ್ಥನೆಯ ಕುರಿತು ಯೇಸು ಬೋಧಿಸಿದ್ದು
ಮತ್ತಾ 6:9-13; 7:7-11

1 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. 2 ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. 3 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು. 5 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. 6 ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, 7 ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ 8 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ. 9 ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. 11 ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? 12 ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? 13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು. ಯೇಸು ಮತ್ತು ಬೆಲ್ಜೆಬೂಲ
ಮತ್ತಾ 12:22-30; ಮಾರ್ಕ 3:20-27

14 ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. 15 ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು. 16 ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು. 17 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು. 18 ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, 19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. 20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. 21 “ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; 22 ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. 23 ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. ದೆವ್ವದ ಮರಳುವಿಕೆ
ಮತ್ತಾ 12:43-45

24 “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು, 25 ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ, 26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು. ನಿಜವಾದ ಆನಂದ 27 ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28 ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು. ಸೂಚಕಕಾರ್ಯದ ಗುರುತಿಗಾಗಿ ಬೇಡಿಕೆ
ಮತ್ತಾ 12:38-42

29 ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. 30 ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. 31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 32 ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. ದೇಹದ ಬೆಳಕು
ಮತ್ತಾ 5:15; 6:22-23

33 “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು. 35 ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು. 36 ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. ಯೇಸು ಫರಿಸಾಯರ ಮತ್ತು ಧರ್ಮೋಪದೇಶಕರ ದುರ್ಗುಣಗಳನ್ನು ಖಂಡಿಸಿದ್ದು
ಮತ್ತಾ 23:1-36; ಮಾರ್ಕ 12:38-40

37 ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. 38 ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39 ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. 41 ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು. 42 43 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು. “ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. 44 ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. 45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು, 46 ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ. 47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ. 48 ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. 49 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ 50 (50-51) ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. 51 52 ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. 53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ, 54 ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 24
×

Alert

×

Kannada Letters Keypad References