1. {ಕಪಟತನದ ಬಗ್ಗೆ ಎಚ್ಚರಿಕೆ} (ಮತ್ತಾ 10:26-31) PS ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
|
3. ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. PEPS
|
4. “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
|
5. ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
|
7. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಮತ್ತಾ 10:32-33; 12:32; 10:19,20 PEPS
|
8. {ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು} PS “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
|
9. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.
|
10. ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
|
11. ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
|
13. {ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ} PS ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
|
14. ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
|
15. ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು. PEPS
|
17. ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
|
18. ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,
|
19. ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. PEPS
|
20. “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
|
21. ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು. PS
|
22. {ದೇವರಲ್ಲಿ ಭರವಸೆ} (ಮತ್ತಾ 6:25-34) PS ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.
|
24. ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
|
25. ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು * ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ಅಥವಾ ಚಿಂತೆಮಾಡಿ ಮಾಡಿ ಒಂದು ಮೊಳ ಉದ್ದ ಬೆಳೆಯುವುದು. ನಿಮ್ಮಲ್ಲಿ ಯಾರಿಂದಾದೀತು?
|
27. ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
|
28. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
|
33. ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
|
35. {ಎಚ್ಚರಿಕೆಯುಳ್ಳ ಆಳುಗಳು} (ಮತ್ತಾ 24:45-51) PS “ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
|
36. ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
|
37. ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
38. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
|
39. ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
|
41. ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, PEPS
|
42. ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
|
45. ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
|
46. ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
|
47. ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
|
48. ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. PS
|
49. {ಯೇಸುವಿನ ನಿಮಿತ್ತ ವಿಭಜನೆಗಳು} (ಮತ್ತಾ 10:34-36) PS “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
|
51. ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
|
52. ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
|
53. ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. ಮತ್ತಾ 16:2,3 PEPS
|
54. {ಕಾಲದ ಅರ್ಥೈಸುವಿಕೆ} PS ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
|
56. ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? ಮತ್ತಾ 5:25,26 PEPS
|
57. {ಪ್ರತಿವಾದಿಯೊಂದಿಗೆ ಸಂಧಾನ} PS “ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?
|
58. ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
|
59. ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು. PE
|