1. {#1ಯೇಸು ಜಲೋದರ ರೋಗಿಯನ್ನು ಸ್ವಸ್ಥಪಡಿಸಿದ್ದು } [PS]ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
2. ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ[* ಹೊಟ್ಟೆಯಲ್ಲಿ ನೀರು ತುಂಬಿಕೊಂಡಿರುವ ಒಂದು ರೋಗ ] ಒಬ್ಬ ಮನುಷ್ಯನಿರುವುದನ್ನು ನೋಡಿ,
3. [SCJ]“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?”[SCJ.] ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
4. ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
5. [SCJ]“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?”[SCJ.] ಎಂದು ಅವರನ್ನು ಕೇಳಿದನು.
6. ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು. [PE]
7. {#1ನಮ್ರತೆ ಮತ್ತು ಅತಿಥಿ ಸತ್ಕಾರ } [PS]ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
8. ಅದೇನೆಂದರೆ, [SCJ]“ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು[SCJ.]
9. [SCJ]ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.[SCJ.]
10. [SCJ]ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.[SCJ.]
11. [SCJ]ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”[SCJ.] ಅಂದನು. [PE]
12. [PS]ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, [SCJ]“ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.[SCJ.]
13. [SCJ]ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,[SCJ.]
14. [SCJ]ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”[SCJ.] [PE]
15. {#1ಮಹಾ ಔತಣದ ಸಾಮ್ಯ [BR]ಮತ್ತಾ 22:1-10 } [PS]ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
16. ಯೇಸು ಅವನಿಗೆ ಹೇಳಿದ್ದೇನಂದರೆ, [SCJ]“ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.[SCJ.]
17. [SCJ]ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.[SCJ.]
18. [SCJ]ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.[SCJ.]
19. [SCJ]ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.[SCJ.]
20. [SCJ]ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.[SCJ.]
21. [SCJ]ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.[SCJ.]
22. [SCJ]ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.[SCJ.]
23. [SCJ]ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.[SCJ.]
24. [SCJ]ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ”[SCJ.] ಅಂದನು. [PE]
25. {#1ಶಿಷ್ಯತ್ವದ ಬೆಲೆ [BR]ಮತ್ತಾ 10:37-38 } [PS]ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
26. [SCJ]“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.[SCJ.]
27. [SCJ]ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.[SCJ.]
28. [SCJ]ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?[SCJ.]
29. [SCJ]ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,[SCJ.]
30. [SCJ]‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.[SCJ.]
31. [SCJ]ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?[SCJ.]
32. [SCJ]ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.[SCJ.]
33. [SCJ]ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.[SCJ.] [PE]
34. {#1ಸಪ್ಪೆಯಾದ ಉಪ್ಪು [BR]ಮತ್ತಾ 5:13; ಮಾರ್ಕ 9:50 } [PS] [SCJ]“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?[SCJ.]
35. [SCJ]ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”[SCJ.] ಅಂದನು. [PE]